ಲಾಕ್‍ಡೌನ್ ನಡ್ವೆ ಪೊಲೀಸರ ಮೊಬೈಲ್ ಕದ್ದ ಕಳ್ಳರು

Public TV
1 Min Read

ಬೆಂಗಳೂರು: ಲಾಕ್‍ಡೌನ್ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕದ್ದಿದ್ದಾರೆ.

ಪಾದರಾಯನಪುರದಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರನ್ನು ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದರು. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ರು. ಈ ಸಮಯದಲ್ಲಿಯೇ ಕಳ್ಳ ಪೇದೆಗಳಿಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಸದ್ಯ ಕಳ್ಳತನ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಲಾಕ್‍ಡೌನ್ ಇದ್ರೂ ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚು ಬೈಕ್ ಗಳು ರಸ್ತೆಗಿಳಿದಿವೆ. ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅನಾವಶ್ಯಕವಾಗಿ ಓಡಾಡ್ತಿರುವ ವಾಹನಗಳನ್ನ ಸೀಜ್ ಮಾಡಿದ್ದಾರೆ. ಹೆದ್ದಾರಿಯಲ್ಲಿ ಒಂದೊಂದೆ ವಾಹನಗಳನ್ನು ತಪಾಸಣೆ ಮಾಡುತ್ತಿರುವದರಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ವಾತಾವರಣ ನಿರ್ಮಾಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *