ಟಿಕ್‍ಟಾಕ್ ನಿಷೇಧಿಸಲು ಕೇಂದ್ರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಪತ್ರ

Public TV
2 Min Read

ನವದೆಹಲಿ: ಯುವ ಜನತೆಯನ್ನು ಟಿಕ್‍ಟಾಕ್ ತಪ್ಪು ದಾರಿಗೆ ಎಳೆಯುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅಭಿಪ್ರಾಯಪಟ್ಟಿದ್ದು, ಟಿಕ್‍ಟಾಕನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದಾರೆ.

ಮನರಂಜನೆಗಾಗಿ ಆರಂಭವಾದ ಟಿಕ್‍ಟಾಕ್ ಇಂದು ಹಿಂಸೆಯನ್ನು ಪ್ರೇರೆಪಿಸುತ್ತಿದೆ. ಮಹಿಳೆಯ ಮೇಲಿನ ಅತ್ಯಾಚಾರ, ಆ್ಯಸಿಡ್ ದಾಳಿಗೆ ಪ್ರೇರಣೆ ನೀಡುವ ವಿಡಿಯೋಗಳು ಟಿಕ್‍ಟಾಕ್‍ನಲ್ಲಿ ಹೆಚ್ಚಾಗುತ್ತಿದೆ ಎಂದು ಬಿಜೆಪಿ ನಾಯಕ ತಾಜೀಂದರ್ ಸಿಂಗ್ ಮಾಡಿರುವ ಟ್ವೀಟ್‍ಗೆ ರೇಖಾ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.  ಇದನ್ನು ಓದಿ: ಟಿಕ್‍ಟಾಕ್ ಬಳಕೆಯಲ್ಲಿ ವಿಶ್ವದಲ್ಲೇ ಭಾರತ ನಂಬರ್ 1

ಆ್ಯಸಿಡ್ ದಾಳಿಗೆ ಪ್ರೇರಣೆ ನೀಡುವ ರೀತಿ ಟಿಕ್‍ಟಾಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ. ಇತ್ತೀಚೆಗೆ ಟಿಕ್‍ಟಾಕ್‍ನಲ್ಲಿ 1.34 ಕೋಟಿ ಹಿಂಬಾಲಕರನ್ನು ಹೊಂದಿದ್ದ ಫೈಜಲ್ ಸಿದ್ದಿಕಿ ಇಂತಹ ವಿಡಿಯೋ ಮಾಡಿದ್ದ. ಇಂತಹ ವಿಡಿಯೋಗಳು ಸಮಾಜದ ಮೇಲೆ ಋಣಾತ್ಮಕ ಪರಿಣಾಮಗಳನ್ನು ಬೀರುತ್ತವೆ. ವಿಡಿಯೋ ಮಾಡಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಕ್ರಮಕೈಗೊಳ್ಳಲು ಮಹಾರಾಷ್ಟ್ರ ಡಿಜಿಪಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ರೇಖಾ ಶರ್ಮಾ ಮಾಹಿತಿ ನೀಡಿದ್ದಾರೆ.  

ಹಿಂಸೆಗೆ ಪ್ರಚೋದಿಸುವ ವಿಡಿಯೋಗಳನ್ನು ಕೂಡಲೇ ಆ್ಯಪ್‍ನಿಂದ ತೆಗೆದು ಹಾಕುವಂತೆ ಆಗ್ರಹಿಸಿರುವ ಅವರು, ಇಂತಹ ಆಕ್ಷೇಪರ್ಹ ವಿಡಿಯೋಗಳು ಮಾತ್ರವಲ್ಲದೇ ಮಾತ್ರವಲ್ಲದೇ ಟಿಕ್‍ಟಾಕ್ ಯುವ ಜನತೆಯನ್ನು ಅನುತ್ಪಾದಕ ಜೀವನ ಹಾಗೂ ಕೆಲ ಹಿಂಬಾಲಕರನ್ನು ಪಡೆಯವತ್ತ ತಳ್ಳುತ್ತಿದೆ. ಅನುಯಾಯಿಗಳು ಸಿಕ್ಕದಿದ್ದಾಗ ಕೆಲವರು ಸಾವಿಗೂ ಶರಣಾಗುತ್ತಿದ್ದಾರೆ ಎಂದು ರೇಖಾ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.

ಸದ್ಯ ಸಾಕಷ್ಟು ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಮಾಡುವುದನ್ನು ವೈಭವಿಕರಿಸಲಾಗಿದೆ. ಅಲ್ಲದೇ ಅತ್ಯಾಚಾರಿಗಳನ್ನು ವೈಭವಿಕರಿಸಿ ತೋರಿಸಲಾಗಿದೆ. ಇತ್ತ ಸಾಮಾಜಿಕ ಜಾಲತಾಣದಲ್ಲೂ #BanTikToklnlndia ಹ್ಯಾಶ್ ಟ್ಯಾಗ್ ಮೂಲಕ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಭಾರತದಲ್ಲಿ ಟಿಕ್‍ಟಾಕ್ ನಿಷೇಧ ಮಾಡಬೇಕು ಎಂಬ ಆಗ್ರಹ ಮತ್ತೊಮ್ಮೆ ಜೋರಾಗಿದೆ.

Share This Article
Leave a Comment

Leave a Reply

Your email address will not be published. Required fields are marked *