ಸೆಟ್ಟೇರಿದ ‘ಶುಗರ್ ಫ್ಯಾಕ್ಟರಿ’ ಚಿತ್ರ – ಮನಸಾಲಜಿ ಖ್ಯಾತಿಯ ದೀಪಕ್ ಅರಸ್ ಎರಡನೇ ಸಿನಿಮಾ

Public TV
1 Min Read

ದೀಪಕ್ ಅರಸ್ ನಿರ್ದೇಶನದ ‘ಶುಗರ್ ಫ್ಯಾಕ್ಟರಿ’ ಚಿತ್ರ ಸೆಟ್ಟೇರಿದೆ. ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು, ನಿರ್ದೇಶಕ ತರುಣ್ ಸುದೀರ್ ಚಿತ್ರಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿ ಶುಭ ಕೋರಿದ್ದಾರೆ. ನಟಿ ಅಮೂಲ್ಯ ಸಹೋದರರಾಗಿರುವ ದೀಪಕ್ ಅರಸ್ ಈ ಹಿಂದೆ ಅಮೂಲ್ಯ, ರಾಕೇಶ್ ಅಡಿಗ ಜೋಡಿಯ ಮನಸಾಲಜಿ ಚಿತ್ರ ನಿರ್ದೇಶಿಸಿದ್ದರು, ಇದೀಗ ಎರಡನೇ ಸಿನಿಮಾವಾಗಿ ಶುಗರ್ ಫ್ಯಾಕ್ಟರಿ ಚಿತ್ರ ನಿರ್ದೇಶನ ಮಾಡುತ್ತಿದ್ದು, ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನ ದೀಪಕ್ ಅರಸ್ ಅವರೇ ಬರೆದಿದ್ದಾರೆ.

ಫನ್ ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಅದ್ವಿತಿ ಶೆಟ್ಟಿ, ಸೊನಾಲ್ ಮೊಂಥೆರೋ, ಶಿಲ್ಪಾ ಶೆಟ್ಟಿ ಶುಗರ್ ಫ್ಯಾಕ್ಟರಿ ನಟಿಮಣಿಯರಾಗಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಅರಸು ಅಂತಾರೆ, ಚಂದನ್ ಶೆಟ್ಟಿ ಸಾಹಿತ್ಯ ಬರೆಯುತ್ತಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣದಲ್ಲಿ ಶುಗರ್ ಪ್ಯಾಕ್ಟರಿ ಚಿತ್ರ ಸೆರೆಯಾಗಲಿದೆ.

ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಗಿರೀಶ್ ಶುಗರ್ ಫ್ಯಾಕ್ಟರಿ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಚಿತ್ರತಂಡ ಮೊದಲ ಹಂತದ ಶೂಟಿಂಗ್ ಆರಂಭಿಸಿದ್ದು, ಮೈಸೂರು, ಗೋವಾ ಹಾಗೂ ವಿದೇಶಗಳಲ್ಲೂ ಸಿನಿಮಾ ಸೆರೆ ಹಿಡಿಯುವ ಪ್ಲ್ಯಾನ್ ಮಾಡಿಕೊಂಡಿದೆ. ರಂಗಾಯಣ ರಘು, ಗೋವಿಂದೇ ಗೌಡ, ಸೂರಜ್ ಕುಮಾರ್, ಮಹಂತೇಶ್, ಪವನ್ ಎಸ್ ನಾರಾಯಣ್, ರಾಯಲ್ ರವಿ, ಅವೀಕ್ಷ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಬಳಗದಲ್ಲಿದ್ದಾರೆ. ಅರ್ಜುನ್ ಸಾಹಸ ನಿರ್ದೇಶನ, ಧನಂಜಯ್ ನೃತ್ಯ ನಿರ್ದೇಶನ ಶುಗರ್ ಫ್ಯಾಕ್ಟರಿ ಚಿತ್ರಕ್ಕಿದೆ.

Share This Article
Leave a Comment

Leave a Reply

Your email address will not be published. Required fields are marked *