ಪೆಟ್ರೋಲ್‌, ಡೀಸೆಲ್‌ ತೆರಿಗೆ ಇಳಿಸಲ್ಲ – ಧರ್ಮೇಂದ್ರ ಪ್ರಧಾನ್‌

Public TV
1 Min Read

ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಸುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ತೈಲಗಳ ಮೇಲಿರುವ ಅಬಕಾರಿ ಸುಂಕವನ್ನು ಕಡಿಮೆ ಮಾಡಲಾಗುತ್ತಾ ಎಂಬ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕಳೆದ 300 ದಿನಗಳ ಪೈಕಿ 60 ದಿನಗಳ ಕಾಲ ಬೆಲೆ ಏರಿಕೆಯಾಗಿದೆ. ಹತ್ತಿರ ಹತ್ತಿರ 250 ದಿನಗಳ ಕಾಲ ನಾವು ಬೆಲೆಯನ್ನು ಏರಿಕೆ ಮಾಡಿಲ್ಲ, ಇಳಿಕೆಯೂ ಮಾಡಿಲ್ಲ ಎಂದು ಉತ್ತರಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಬೆಲೆ ಏರಿಕೆ ಮತ್ತು ಇಳಿಕೆ ಆಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ತೆರಿಗೆ ಮೂಲಕ ಸರ್ಕಾರಕ್ಕೆ ಸಂಪನ್ಮೂಲ ಬರುತ್ತದೆ. ಸಂಗ್ರಹಗೊಂಡ ತೆರಿಗೆಯನ್ನು ಅಭಿವೃದ್ಧಿ ಯೋಜನೆಗಳು, ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ – ದರ ಹೆಚ್ಚಾಗುತ್ತಿರುವುದಕ್ಕೆ ಕಾರಣ ಏನು?

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆ ಸಂಗ್ರಹದಲ್ಲಿ ಬಹಳ ಜಾಗರೂಕವಾಗಿದೆ. ಯಾಕೆಂದರೆ ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿವೃದ್ಧಿ ಬದ್ಧತೆ ಇದೆ. ಈ ಕಾರಣಕ್ಕೆ ಈ ಮಾರ್ಗದಿಂದ ಕೆಲವು ಸಂಪನ್ಮೂಲಗಳು ಬೇಕಾಗುತ್ತದೆ. ಪೆಟ್ರೋಲಿಯಂ ಬೆಲೆ ತೆರಿಗೆ ಸಂಗ್ರಹವು ಗಣನೀಯ ಪ್ರಮಾಣದಲ್ಲಿ ರಾಜ್ಯ ಸರ್ಕಾರಗಳಿಗೆ ಸಂಗ್ರಹವಾಗುತ್ತದೆ ಎಂದು ಹೇಳಿದರು.

ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 2.50 ರೂ. ವ್ಯಾಟ್‌ ಕಡಿತ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಮನವಿ ಮಾಡಿಕೊಂಡಿದೆ ಎಂದು ತಿಳಿಸಿದರು.

2018ರ ಅಕ್ಟೋಬರ್‌ 5 ರಂದು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 1.5 ರೂ ಅಬಕಾರಿ ಸುಂಕವನ್ನು ಕಡಿತಗಳಿಸಲಾಗಿದೆ. ಸಾರ್ವಜನಿಕ ತೈಲ ಕಂಪನಿಗಳು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ತೈಲದ ಮೇಲೆ 1 ರೂ. ಅಬಕಾರಿ ಸುಂಕವನ್ನು ಕಡಿತ ಮಾಡಿದೆ ಎಂದು ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *