ಬಬ್ರುವಾಹನ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ನಿಧನ

Public TV
0 Min Read

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್(69) ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಚಂದ್ರಶೇಖರ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದರು. ಇದನ್ನೂ ಓದಿ : ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿಯೂ ಚಂದ್ರಶೇಖರ್ ಆಯ್ಕೆ ಆಗಿದ್ದರು. ಶಿವಾನಂದ ಸರ್ಕಲ್ ಬಳಿ ಇರುವ ನಿವಾಸದಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *