ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ: ಹೆಬ್ಬಾರ್

Public TV
1 Min Read

ಬೆಂಗಳೂರು: ಕಳೆದ ಮೂರು ನಾಲ್ಕು ದಿನದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ನದಿ ಹಳ್ಳಕೊಳ್ಳಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಇಡೀ ಜಿಲ್ಲೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಕದರ ಮತ್ತು ಕೊಡಸಳ್ಳಿಯ ಎರಡು ಡ್ಯಾಂ ನಿಂದ 2500 ಲಕ್ಷಕ್ಕೂ ಅಧಿಕ ನೀರನ್ನ ಹೊರ ಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದ 5 ಗ್ರಾಮಗಳನ್ನ ಶಿಫ್ಟ್ ಮಾಡಿಸಲಾಗಿದೆ. ಅಂಕೋಲಾ ತಾಲೂಕಿನಲ್ಲಿ ಉಂಟಾಗಿರೋ ಪ್ರವಾಹದಿಂದ ಇಬ್ಬರು ತಪ್ಪಿಸಿಕೊಂಡಿದ್ದಾರೆ. ಅವರ ಹುಡುಕಾಟದ ಕಾರ್ಯವನ್ನ ಸಹ ಈಗಾಗಲೇ ಶುರುಮಾಡಲಾಗಿದೆ. ಪ್ರವಾಹದಲ್ಲಿ ಸಿಲುಕಿದ 6 ಜನ ಪ್ರವಾಸಿಗರನ್ನ ರಕ್ಷಣೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ನಟೋರಿಯಸ್ ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ

ಹೋಟೆಲ್ ನವಮಿಯಲ್ಲಿ 11 ಜನ ಸಿಲುಕಿದ್ದಾರೆ. ಹೋಟೆಲ್ ನಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, 11 ಜನ ಹೋಟೆಲ್ ಮೇಲ್ಭಾಗದಲ್ಲಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಏರ್ ಲಿಫ್ಟ್ ಮಾಡಿಸುವಂತೆ ಸಹ ಸೂಚನೆ ನೀಡಲಾಗಿದೆ. ಎರಡು ದಿನ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿರೀಕ್ಷೆಗೂ ಮೀರಿದ ಮಳೆಯಾಗ್ತಿರುವುದರಿಂದ ಜಿಲ್ಲೆಯ ಜನರ ಜೀವನ ಅಸ್ತವ್ಯಸ್ತವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಟೀ ಶರ್ಟ್, ಜೀನ್ಸ್ ಪ್ಯಾಂಟ್ ತೊಟ್ಟಳೆಂದು ಹುಡುಗಿಯ ಕೊಲೆ ಮಾಡಿದ್ರು!

ನಾನು ನಾಳೆಯಿಂದ ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇನೆ, ಎಲ್ಲಾ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮಳೆಯಿಂದಾಗುವ ಅನಾಹುತಗಳನ್ನ ತಡಯುವ ಮತ್ತು ಜನರ ಸುರಕ್ಷಿತೆಗಳ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಪಬ್ಲಿಕ್ ಟಿವಿಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *