ಯಡಿಯೂರಪ್ಪ ಮೊಮ್ಮಕ್ಕಳನ್ನು ಆಡಿಸುತ್ತಾ ಮನೆಯಲ್ಲಿರಲಿ: ಯತ್ನಾಳ್

Public TV
2 Min Read

ವಿಜಯಪುರ: ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಆದರೆ ಹೈಕಮಾಂಡ್ ಸಚಿವ ಸ್ಥಾನ ನೀಡಿದರೆ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದೇನೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ನನಗೆ ಕರ್ನಾಟಕದ ಸಿಎಂ ಆಗಿ ಕೆಲಸ ಮಾಡುವ ತಾಕತ್ತು ಇದೆ. ನನ್ನನ್ನು ಸದುಪಯೋಗ ಮಾಡಿಕೊಳ್ಳುತ್ತಿಲ್ಲ. ನನ್ನ ಸದುಪಯೋಗ ಮಾಡಿಕೊಂಡರೆ ಮುಂದಿನ ಬಾರಿ ರಾಜ್ಯದಲ್ಲಿ 150 ಸ್ಥಾನಗಳು ಬರುತ್ತದೆ. ಯಾರು ನನ್ನ ಸಿಎಂ ಸ್ಥಾನಕ್ಕೆ ಅಡತಡೆ ಮಾಡಿದ್ದರು, ಅವರ ರಾಜಕೀಯ ಭವಿಷ್ಯ ಮುಗಿದೆ. ಪಾಪ ವಿಶ್ರಾಂತಿ ತೆಗೆದುಕೊಳ್ಳಲಿ, ಮೊಮ್ಮಕ್ಕಳನ್ನು ಆಟ ಆಡಿಸುತ್ತಾ ಮನೆಯಲ್ಲಿ ಇರಲಿ ಎಂದು ಪರೋಕ್ಷವಾಗಿ ಯಡ್ಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ.

ವಿಜಯಪುರಕ್ಕೆ ಈ ಬಾರಿ ಅನ್ಯಾಯ ಆಗಲ್ಲ, ಯಡ್ಡಿಯೂರಪ್ಪ ಅವರ ಮನೆಯಲ್ಲಿ ಈಗಾಗಲೇ ಒಬ್ಬರು ಇದ್ದಾರೆ. ಎಷ್ಟು ಜನರಿಗೆ ಅಂತಾ ಕೊಡುವುದು. ಒಂದು ಮನೆಯಲ್ಲಿ ಎಷ್ಟು ಜನ ಎಂಎಲ್‍ಎ, ಎಂಪಿ ಆಗಬೇಕು. ಹೈಕಮಾಂಡ್‍ಗೆ ಗೊತ್ತಿದೆ. ಈ ಅನುವಂಶಿಕವನ್ನು ಮುಂದುವರೆಸಬಾರದೆಂದು ಯಡ್ಡಿಯೂರಪ್ಪ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದಾರೆ. ಅವರಿಗೂ ಬೆನ್ನಿಗೆ ಚೂರಿ ಹಾಕದೆ ಇದ್ದರೆ ಸಾಕು ಎಂದು ಹೇಳಿದ್ದಾರೆ.

ವಿಜಯಪುರದಿಂದ ಬಾಗಲಕೋಟೆವರೆಗೆ ಈಶ್ವರಪ್ಪ ಜೊತೆ ಪ್ರಯಾಣ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ವಿ, ಮುಂಬರುವ ಚುನಾವಣೆಯನ್ನು ಒಟ್ಟಾಗಿ ಎದುರಿಸುವ ಬಗ್ಗೆ, ಹೆಚ್ಚಿನ ಸಂಖ್ಯೆಯಲ್ಲಿ ಸೀಟ್ ತರುವ ಬಗ್ಗೆ ಚರ್ಚೆ ಮಾಡಿದ್ವಿ. ಭ್ರಷ್ಟರಿಗೆ ಹೊಗಳ ಭಟ್ಟರಿಗೆ ಇಟ್ಟುಕೊಂಡ್ರೆ ಮುಂದಿನ ಚುನಾವಣೆಯಲ್ಲಿ ಕಷ್ಟ ಆಗುತ್ತೆ ಅಂತಾ ಮಾತನಾಡದ್ವಿ ಎಂದು ತಿಳಿಸಿದ್ದಾರೆ.

ನಿನ್ನ ಹಠ ಸಾಧಿಸಿದ್ದಿಯಾ, ಇನ್ನು ಮುಂದೆ ಎಲ್ಲರು ಪಕ್ಷ ಕಟ್ಟೋಣ. ಬಹಿರಂಗವಾಗಿ ಹೇಳಿಕೆ ಕೊಡಬೇಡ ಅಂತ ನನಗೆ ಸಲಹೆ ನೀಡಿದರು. ಅವರು ಹಿರಿಯರು ಅವರ ಮಾತಿಗೆ ನಾನು ಒಪ್ಪಿದ್ದೇನೆ. ಅಲ್ಲದೇ ಯಡ್ಡಿಯೂರಪ್ಪನವರು ಗೌರವಯುತವಾಗಿ ನಿರ್ಗಮನ ಆಗಿದ್ದಾರೆ. ಹೈಕಮಾಂಡ್ ಅವರಿಗೆ ಬಹಳ ಗೌರವ ಕೊಟ್ಟು ಮೋದಿಯವರು, ನಡ್ಡಾ ಅವರು, ಅಮಿತ್ ಶಾ ಅವರು ಅವರಿಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ನೀವು ಸಾಕಷ್ಟು ಕಷ್ಟ ಪಟ್ಟಿದ್ದೀರಿ. ಸೈಕಲ್ ತುಳಿದು ಪಕ್ಷ ಕಟ್ಟಿದ್ದೀರಿ. ಈಗ ನೀವು ಸ್ವಂತ ಹೆಲಿಕಾಪ್ಟರ್ ನಲ್ಲಿ ತಿರುಗಾಡುವಂತಹ ಶಕ್ತಿ ಬಿಜೆಪಿಯಿಂದ ಸಿಕ್ಕಿದೆ. ಬಿಜೆಪಿ ಋಣ ಬಹಳ ಇದೆ. ಅದಕ್ಕೆ ನಿಮ್ಮ ನಿವೃತ್ತಿ ಜೀವನಕ್ಕೆ ಒಳ್ಳೆಯದಾಗಲಿ ಅಂತ ಸಂದೇಶದೊಂದಿಗೆ ಸ್ಪಷ್ಟವಾದ ಸಂಕೇತ ಕೊಟ್ಟಿದೆ ಎಂದು ನುಡಿದಿದ್ದಾರೆ.

ಇವತ್ತು ಬೊಮ್ಮಾಯಿ ಅವರ ಆಯ್ಕೆ ಯಡ್ಡಿಯೂರಪ್ಪನವರದು. ಬೊಮ್ಮಾಯಿ ಅವರಿಗೂ ಬೆಂಬಲ ಕೊಡಲಿಲ್ಲ ಅಂದರೆ, ಇವರು ಯಾರನ್ನು ಸಹಿಸುವುದಿಲ್ಲ. ಇವರು ಮುಂದೆ ತಮ್ಮ ಮಗನನ್ನೇ ಉತ್ತರಾಧಿಕಾರಿಯಾಗಿ ಮಾಡಲು ಬೊಮ್ಮಾಯಿ ಅವರನ್ನು ತಾತ್ಕಾಲಿವಾಗಿ ತಯಾರಿ ಮಾಡಿದ್ದಾರೆ ಎಂಬ ಸಂಶಯ ಬರಲು ಪ್ರಾರಂಭವಾಗುತ್ತೆ. ನಿನ್ನೆ ದೇವೆಗೌಡರು ಬೊಮ್ಮಾಯಿ ಸರ್ಕಾರಕ್ಕೆ ಏನಾದರೂ ತೊಂದರೆ ಆದರೆ, ನಾವು ಬೆಂಬಲಕೊಡುತ್ತೇವೆ ಎಂದಿದ್ದಾರೆ. ಯಡ್ಡಿಯೂರಪ್ಪನವರ ಜೊತೆ 10-20 ಜನರು ಹೋಗುತ್ತೀವಿ ಎಂದರೆ, ಜೆಡಿಎಸ್ ಬೆಂಬಲ ಇದೆ. ಇದು ಕೇಂದ್ರದ ಸೂಚನೆಯ ಮೇರೆಗೆ ಬೊಮ್ಮಾಯಿ ದೇವೆಗೌಡರನ್ನು ಭೇಟಿ ಮಾಡಿದ್ದಾರೆ ಅಂತ ನನಗೆ ಅನಿಸುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ದೇವೇಗೌಡರು, ಯಡಿಯೂರಪ್ಪ ನನ್ನ ಮೆಚ್ಚಿನ ನಾಯಕರು: ಕೆ.ಎಸ್.ಈಶ್ವರಪ್ಪ

Share This Article
Leave a Comment

Leave a Reply

Your email address will not be published. Required fields are marked *