ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಕಾರ್ಯಕ್ರಮ ಇಂದು ನಡೆಯುತ್ತಿದೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಇದೀಗ ಎಂಟು ತಿಂಗಳು ತುಂಬಿದ್ದು, ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಲ್ಲದೇ ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

nikil

ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿಖಿಲ್ ಆಗಾಗ ಪತ್ನಿ ಜೊತೆಗಿರುವ ಕೆಲವೊಂದು ಮುದ್ದಾದ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸದ್ಯ ಕಳೆದ ವಾರವಷ್ಟೇ ಗಣೇಶ ಹಬ್ಬದಂದು ಪತ್ನಿ ಜೊತೆ ಹಬ್ಬ ಆಚರಿಸಿದ ನಿಖಿಲ್ ಸಂಪ್ರದಾಯಿಕ ಉಡುಗೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನೂ ಓದಿ: ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಸೀಮಂತವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: ಎಂದಿಗೂ ಮರೆಯಲಾಗದ ದಿನದ ಫೋಟೋ ಹಂಚಿಕೊಂಡ ನಿಖಿಲ್

Share This Article
Leave a Comment

Leave a Reply

Your email address will not be published. Required fields are marked *