ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

Public TV
1 Min Read

ಆನೇಕಲ್: ಕೊರೊನಾ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಆನೇಕಲ್ ತಾಲೂಕು ಆರೋಗ್ಯ ಇಲಾಖೆ ವತಿಯಿಂದ 0-18 ವರ್ಷ ವಯಸ್ಸಿನ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಆನೇಕಲ್ ಪಟ್ಟಣದ ಹಳೆಯ ಮಾಧ್ಯಮಿಕ ಪಾಠಶಾಲೆಯ ಆವರಣದಲ್ಲಿ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಮಕ್ಕಳು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಮಕ್ಕಳಿಗೆ ನೂರಿತ ವಿಶೇಷ ತಜ್ಞರು ಪರೀಕ್ಷಿಸಿದರು. ಅವರಿಗೆ ಸೂಕ್ತ ಔಷಧ ಹಾಗೂ ಚಿಕಿತ್ಸೆಯನ್ನು ನೀಡಿದರು. ಇದನ್ನೂ ಓದಿ:  ವಿಗ್ರಹಗಳ ಪಾಲಿಶ್ ಮಾಡಿಕೊಡುವ ನೆಪದಲ್ಲಿ ಮನೆಯಲ್ಲಿದ್ದ ಚಿನ್ನಾಭರಣಗಳ ಲೂಟಿ

ಸ್ಥಳೀಯವಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಆಯಾ ಏರಿಯಾಗಳಲ್ಲಿನ ಮಕ್ಕಳನ್ನು ಗುರುತಿಸಿ ತೂಕ, ಎತ್ತರ ಸೇರಿದಂತೆ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ನಂತರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳನ್ನು ಗುರುತಿಸಿ ಇಂದು ಆರೋಗ್ಯ ತಪಾಸಣೆಗೆ ಕರೆತರಲಾಗಿದೆ.

ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಅಪೌಷ್ಟಿಕತೆಗೆ ತುತ್ತಾಗುತ್ತಿದ್ದಾರೆ. ಈ ಮಕ್ಕಳಲ್ಲಿ ಅಂಗವೈಕಲ್ಯ, ಕಡಿಮೆ ಬುದ್ಧಿಶಕ್ತಿ, ಕುರುಡುತನ, ಹೃದಯ ಸಂಬಂಧಿ ಸಮಸ್ಯೆ, ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತ ಈ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮಕ್ಕಳು ತುತ್ತಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಸೂಚನೆಯಂತೆ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ:  ಚಿನ್ನದ ಪದಕ ಗೆದ್ದ ಜಮ್ಮು ಬಿಯರ್

ತಾಲೂಕಿನಲ್ಲಿ 47 ಅಪೌಷ್ಟಿಕತೆಯ(ಸ್ಯಾಮ್) ಮಕ್ಕಳಿದ್ದು, 120 ಸಾಧಾರಣ ಅಪೌಷ್ಟಿಕತೆಯ (ಮ್ಯಾಮ್) ಮಕ್ಕಳಿದ್ದಾರೆ. ಅವರ ಸಂಪೂರ್ಣ ಮಾಹಿತಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ತೆಗೆದುಕೊಂಡು ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಹಾರವನ್ನು ನೀಡಿತ್ತಾರೆ. ಅಪೌಷ್ಟಿಕತೆಯಿಂದ ಮಕ್ಕಳು ಕೂಡಲೇ ಪಾರಾಗಲು ತಜ್ಞ ವೈದ್ಯರು ಚಿಕಿತ್ಸೆಯನ್ನು ನೀಡುತ್ತಾರೆಂದು ಆನೇಕಲ್ ತಾಲೂಕು ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *