ಕಿಚ್ಚನ ಅಭಿಮಾನಿಗಳಲ್ಲಿ ಸೂರಪ್ಪ ಬಾಬು ಕ್ಷಮೆ

By
1 Min Read

– ನಾಳೆ ಕೋಟಿಗೊಬ್ಬ-3 ಸಿನಿಮಾ ರಿಲೀಸ್

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ರಾಜ್ಯಾದ್ಯಂತ ಇಂದು ತೆರೆಕಾಣಬೇಕಿತ್ತು. ಆದರೆ ತಾಂತ್ರಿಕ ದೋಷಗಳಿಂದ ಚಿತ್ರ ಬಿಡುಗಡೆಗೆ ವಿಳಂಬವಾಗಿದ್ದು, ನಾಳೆ ಸಿನಿಮಾ ರಾಜ್ಯಾದ್ಯಂತ ತೆರೆಕಾಣಲಿದೆ.

ಈ ಕುರಿತಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ನಿರ್ಮಾಪಕ ಸೂರಪ್ಪಬಾಬು ಅವರು, ಕೆಲವು ವಿತರಕರು ಮಾಡಿದ ಮೋಸದಿಂದ ಈ ದಿನ ನನ್ನ ನೆಚ್ಚಿನ ನಟ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಸಿನಿಮಾವನ್ನು ಬಿಡುಗಡೆಗೊಳಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಹಲವಾರು ಕಾರಣಗಳಿದೆ. ಇದರ ಹಿಂದೆ ಹಲವಾರು ಷಡ್ಯಂತರಗಳನ್ನು ಮಾಡಿದ್ದಾರೆ. ಹಾಗಾಗಿ ನನ್ನನ್ನು ಕ್ಷಮಿಸಿ. ಎಂದಿನಂತೆ ನಾಳೆ ಬೆಳಗ್ಗೆ 6 ಗಂಟೆಯಿಂದ ಕಿಚ್ಚನ ಅಭಿಮಾನಿಗಳಿಗೆ ಫ್ಯಾನ್ ಶೋವನ್ನು ಆರಂಭಿಸುತ್ತಿದ್ದೇವೆ. ಇದರಲ್ಲಿ ಯಾವುದೇ ನನ್ನ ತಪ್ಪಿಲ್ಲ. ದಯವಿಟ್ಟು ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ:  ಊಟದ ವಿಚಾರಕ್ಕೆ ತಾಯಿ, ಮಗನ ಗಲಾಟೆ – ಕುಡಿದ ಮತ್ತಿನಲ್ಲಿ ಗುಂಡು ಹಾರಿಸಿ ತಾಯಿ, ಅಕ್ಕನ ಹತ್ಯೆ

ಈ ವಿಚಾರವಾಗಿ ಸುದೀಪ್ ಅವರೇ ನಿಮಗೆ ಸಂಪೂರ್ಣವಾದ ಸತ್ಯ ತಿಳಿದಿದೆ. ತಮ್ಮ ಅಭಿಮಾನಿಗಳಿಗೆ ರಸದೌತಣ ನೀಡಲು ಎಲ್ಲಾ ರೀತಿಯ ವ್ಯವಸ್ಥೆಗೊಳಿಸುತ್ತಿದ್ದೇನೆ. ನಾಳೆ ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಬೆಳಗ್ಗೆ 6 ಗಂಟೆಯಿಂದಲೇ ಚಿತ್ರ ಪ್ರದರ್ಶನ ಆರಂಭವಾಗಲಿದೆ. ಎಲ್ಲರೂ ಸಿನಿಮಾ ನೋಡಿ ಹಾರೈಸಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೋಟಿಗೊಬ್ಬ-3 ಸಿನಿಮಾ ರಿಲೀಸ್ ವಿಳಂಬ- ಅಭಿಮಾನಿಗಳಲ್ಲಿ ಕಿಚ್ಚ ಕ್ಷಮೆ

ಸುದೀಪ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಕೆಲವೊಂದು ವಿಚಾರಗಳಿಂದ ಸಿನಿಮಾದ ಮೊದಲ ಶೋ ವಿಳಂಬವಾಗಿದೆ. ಈ ಬಗ್ಗೆ ಮಾಹಿತಿ ನೀಡುವುದು ನನ್ನ ಕರ್ತವ್ಯವಾಗಿದೆ. ನಾನು ವೈಯಕ್ತಿವಾಗಿ ಎಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ಇದರಲ್ಲಿ ಥಿಯೇಟರ್ ಮಾಲೀಕ ತಪ್ಪಿಲ್ಲ. ಹೀಗಾಗಿ ಅಲ್ಲಿ ಅಹಿತರ ಘಟನೆಗಳನ್ನು ನಡೆಸಬೇಡಿ. ಚಿತ್ರಮಂದಿರಗಳಿಗೆ ಹಾನಿ ಮಾಡಬೇಡಿ. ಇದು ಅತ್ಯಂತ ವಿಚಿತ್ರ ಸನ್ನಿವೇಶವಾಗಿದೆ. ನಿರ್ಲಕ್ಷ್ಯಕ್ಕಾಗಿ ಕ್ಷಮೆಯಾಚಿಸುತ್ತೇನೆ. ಅಭಿಮಾನಿಗಳು ಕೆಟ್ಟ ರೀತಿಯಲ್ಲಿ ವರ್ತಿಸಬಾರದು. ಸಿನಿಮಾ ಬಿಡಗಡೆಯ ಸಮಯವನ್ನು ನಾನೇ ನೀಡುವೆ, ಕೆಲ ಸಮಸ್ಯೆಗಳಿಂದ ರಿಲೀಸ್ ವಿಳಂಬವಾಗಿದೆ ಎಂದು ಬರೆದುಕೊಂಡಿದ್ದಾರೆ.

https://www.youtube.com/watch?v=f3TUYqiTrEM

Share This Article
Leave a Comment

Leave a Reply

Your email address will not be published. Required fields are marked *