ಗೋಣಿ ಚೀಲದಲ್ಲಿ ಹಣ ತಂದು ಹಂಚಿದ್ದು ಕಾಂಗ್ರೆಸ್, ಬಿಜೆಪಿ ಅಲ್ಲ: ಸಿಎಂ ಬೊಮ್ಮಾಯಿ

Public TV
2 Min Read

ವಿಜಯಪುರ: ಗೋಣಿ ಚೀಲದಲ್ಲಿ ಹಣ ತಂದು ಹಂಚಿದವರು ಕಾಂಗ್ರೆಸ್ ಹೊರತು ಬಿಜೆಪಿ ಅಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರ ವಾಪ್ತಿಯ ಕನ್ನೊಳ್ಳಿ ಗ್ರಾಮ ರೋಡ್ ಶೋ ನಡೆಸಿ, ಬಳಿಕ ಭಾಷಣ ಮಾಡಿದ ಅವರು, ಸಿಂದಗಿ ಕ್ಷೇತ್ರದಲ್ಲಿ ವ್ಯಕ್ತವಾಗುತ್ತಿರುವ ಬೆಂಬಲ ನೋಡಿದರೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆಲುವು ಖಚಿತ ಎಂದು ನುಡಿದರು. ಇದನ್ನೂ ಓದಿ:  ಮಕ್ಕಳು ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

ಇದೇ ವೇಳೆ ಬಿಜೆಪಿ ಗೋಣಿ ಚೀಲದಲ್ಲಿ ಹಣ ಹಂಚುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಣ ಹಂಚುವ ಕೆಲಸ ಮಾಡಿದ್ದು ಕಾಂಗ್ರೆಸ್. ಅವರು ಮಾಡಿದ್ದನ್ನು, ಅವರ ಅನುಭವವನ್ನು ಹೇಳುತ್ತಿದ್ದಾರೆ. ಕಾಂಗ್ರೆಸ್ ಸೋತ ಬಳಿಕ ಬಿಜೆಪಿ ಹಣ ಬಲದಿಂದ ಗೆದ್ದಿದೆ ಎಂದು ಆರೋಪಿಸುತ್ತಿದ್ದರು. ಆದರೆ ಈ ಬಾರಿ ಸಿಂದಗಿ ಹಾಗೂ ಹಾನಗಲ್ ನಲ್ಲಿ ಸೋಲೋಕು ಮುಂಚೆಯೇ ಆರೋಪಿಸಲು ಆರಂಭಿಸಿದ್ದಾರೆ. ಕಾಂಗ್ರೆಸ್ ನವರು ಸೋಲಿನ ಹತಾಶೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ನಂತರ ಕ್ಷೇತ್ರದ ರಸ್ತೆ, ನೀರು, ವಿದ್ಯುತ್ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಜನರ ಆಶೀರ್ವಾದದಿಂದ ರಾಜಕೀಯದ ಚಿತ್ರಣವೇ ಬದಲಾಗಿದೆ. ಈ ಬಾರಿ ಬಿಜೆಪಿಗೆ ಮತ ನೀಡಿ. ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ ರಮೇಶ ಭೂಸನೂರ 25 ಸಾವಿರ ಮತಗಳಿಂದ ಗೆಲ್ಲುವುದು ಅಷ್ಟೇ ಸತ್ಯ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

ಕಳೆದ ಬಾರಿ ದಿವಂಗತ ಎಂ ಸಿ ಮನಗೂಳಿ ಕಾಕಾ ಇದ್ದರು. ಅವರ ಮೇಲಿನ ಅನುಕಂಪದಿಂದ ನೀವೆಲ್ಲ ಅವರನ್ನು ಗೆಲ್ಲಿಸಿದ್ರಿ. ಈ ಬಾರಿ ಅವರು ಇಲ್ಲ, ಬಿಜೆಪಿಯನ್ನು ಗೆಲ್ಲಿಸಿ. ನಾನು ಸಿಎಂ ಆದ ಮೇಲೆ ಮೊದಲು ತೆಗೆದುಕೊಂಡ ನಿರ್ಧಾರ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಒಂದು ಸಾವಿರ ಕೋಟಿ ಕೊಟ್ಟಿದ್ದೇನೆ. ನಾನು ಬಡವರ, ದೀನದಲಿತರ ಪರವಾಗಿದ್ದೇನೆ. ಸಂಧ್ಯಾಸುರಕ್ಷಾ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಬಡವರು, ಎಲ್ಲಾ ವರ್ಗದ ಜನರಿಗೆ ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ ಎಫ್‍ಐಆರ್

ಇದೇ ವೇಳೆ ಸಿಎಂಗೆ ಜೊತೆ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಾಥ್ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *