ಡಿಸೆಂಬರ್‌ನಲ್ಲಿ ರಾಜ್ಯಕ್ಕೆ ಪ್ರಧಾನಿ ಭೇಟಿ

Public TV
1 Min Read

ನವದೆಹಲಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಾರ್ಯಗಳ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸುವಂತೆ ಪ್ರಧಾನಿ ಅವರಿಗೆ ಆಹ್ವಾನ ನೀಡಲಾಗಿದೆ. ಬೆಂಗಳೂರು ಉಪನಗರ ರೈಲು ಯೋಜನೆಯ ಅಡಿಗಲ್ಲು ಸಮಾರಂಭ, ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಹಾಗೂ ಉನ್ನತೀಕರಿಸಿದ ಐಟಿಐಗಳ ಉದ್ಘಾಟನೆ ಸೇರಿದಂತೆ ಬೆಂಗಳೂರು ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಪ್ರಧಾನಿಯವರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಇದನ್ನೂ ಓದಿ: ನೂರು ದಿನಗಳ ಆಡಳಿತಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ: ಬಸವರಾಜ ಬೊಮ್ಮಾಯಿ

ಡಿಸೆಂಬರ್ ತಿಂಗಳಲ್ಲಿ ಎರಡು ದಿನ ಈ ಕಾರ್ಯಕ್ರಮಗಳನ್ನು ನಿಗದಿಪಡಿಸುವಂತೆ ಪ್ರಧಾನಿಯವರು ತಿಳಿಸಿದ್ದು, ಎರಡು ಬಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಕಾರ್ಯಾಲಯ ನಿಗದಿ ಪಡಿಸಿದ ದಿನಾಂಕಗಳಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 100 ಕೋಟಿ ಮೌಲ್ಯದ ಆಸ್ತಿ ವಶಕ್ಕೆ ಪಡೆದ BDA

ನಿಷ್ಠೆಯಿಂದ ದಿಟ್ಟತನದಿಂದ ಜನಪರ ಕೆಲಸ ಮಾಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ. ವಿಧಾನಸಭಾ ಉಪಚುನಾವಣೆಯ ಫಲಿತಾಂಶಗಳ ಕುರಿತು ಮಾಹಿತಿ ನೀಡಿದಾಗ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ. 2023ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪರ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆಂದು ಸಿಎಂ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *