ತಾಜ್‌ಮಹಲ್‌ನಂತಯೇ ಮನೆ ಕಟ್ಟಿ ಪತ್ನಿಗೆ ಗಿಫ್ಟ್ ಕೊಟ್ಟ ಪತಿ

Public TV
1 Min Read

ಭೋಪಾಲ್: ವ್ಯಕ್ತಿಯೊಬ್ಬರು ತನ್ನ ಪತ್ನಿ ಮೇಲಿನ ಪ್ರೀತಿಗೆ ತಾಜ್‍ಮಹಲ್ ರೀತಿಯ ಮನೆಯನ್ನು ಕಟ್ಟಿಸಿ ಗಿಫ್ಟ್ ನೀಡಿದ್ದಾರೆ.

ಷಹಜಹಾನ್ ಮುಮ್ತಾಜ್ ನಿಧನದ ನಂತರ ಪತ್ನಿ ಮೇಲಿನ ಪ್ರೀತಿಯ ಸಂಕೇತವಾಗಿ ಆಗ್ರಾದಲ್ಲಿ ತಾಜ್‍ಮಹಲ್ ಕಟ್ಟಿಸಿ ಉಡುಗೊರೆಯಾಗಿ ನೀಡಿದ್ದ. ಇದೇ ರೀತಿ ಮಧ್ಯಪ್ರದೇಶದ ಬುರ್ಹಾನ್‌ಪುರದಲ್ಲಿ ಬೆಲೆಬಾಳುವ ಮನೆಯನ್ನು ನಿರ್ಮಿಸಿ ಆನಂದ್ ಚೋಕ್ಸೆ ಅವರು ತಮ್ಮ ಪತ್ನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಶಾರ್ಟ್ಸ್ ಧರಿಸಿದ್ದಕ್ಕೆ ಬ್ಯಾಂಕ್ ಒಳಗೆ ಬಿಡದ SBI ಸಿಬ್ಬಂದಿ 

ಆನಂದ್ ಚೋಕ್ಸೆ ಅವರು ತಾಜ್ ಮಹಲ್ ಪ್ರತಿರೂಪದಂತೆ 4 ಬೆಡ್ ರೂಮ್‍ಗಳಿರುವ ಮನೆ ನಿರ್ಮಿಸಲು ಮೂರು ವರ್ಷಗಳ ಸಮಯ ತೆಗೆದುಕೊಂಡಿದ್ದಾರೆ. ಮನೆ ಕಟ್ಟುವ ವೇಳೆ ಇಂಜಿನಿಯರ್ ಬಹಳ ಶ್ರಮಪಟ್ಟಿದ್ದು, ಅವರು ತಾಜ್‍ಮಹಲ್ ಕುರಿತಂತೆ ಕೂಲಂಕುಷವಾಗಿ ಅಧ್ಯಯನ ನಡೆಸಿ, ಮನೆಯೊಳಗೆ ಕೆತ್ತನೆ ಮಾಡಲು ಬಂಗಾಳ ಮತ್ತು ಇಂದೋರ್‌ನಿಂದ ಕಲಾವಿದರನ್ನು ಕರೆಸಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಿರುಪತಿಯಲ್ಲಿ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ

ಈ ಮನೆಯ ಮೇಲಿರುವ ಗುಮ್ಮಟ 29 ಅಡಿ ಎತ್ತರವಿದ್ದು, ಇದು ತಾಜ್ ಮಹಲ್ ರೀತಿಯೇ ಗೋಪುರ ಹೊಂದಿದೆ ಮತ್ತು ಮನೆಯ ನೆಲವನ್ನು ರಾಜಸ್ಥಾನದ ಮಕ್ರಾನಾದಿಂದ ಮಾಡಲಾಗಿದ್ದು, ಪೀಠೋಪಕರಣಗಳನ್ನು ಮುಂಬೈನ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ.

ಈ ಮನೆಯಲ್ಲಿ ಒಂದು ದೊಡ್ಡ ಹಾಲ್, ಕೆಳಗೆ 2 ಬೆಡ್ ರೂಮ್, ಮೇಲಿನ ಮಹಡಿಯಲ್ಲಿ 2 ಬೆಡ್ ರೂಮ್, ಗ್ರಂಥಾಲಯ ಮತ್ತು ಧ್ಯಾನ ಕೊಠಡಿಯನ್ನು ನಿರ್ಮಿಸಲಾಗಿದೆ. ಅಷ್ಟೇ ಅಲ್ಲದೇ ಮನೆಯ ಒಳಗೂ, ಹೊರಗೂ ಲೈಟಿಂಗ್ಸ್ ಅಳವಡಿಸಲಾಗಿದ್ದು, ನಿಜವಾದ ತಾಜ್ ಮಹಲ್ ನಂತೆಯೇ ಈ ಮನೆಯೂ ಕತ್ತಲಲ್ಲಿ ಪಳ ಪಳ ಹೊಳೆಯುತ್ತದೆ.

Share This Article
Leave a Comment

Leave a Reply

Your email address will not be published. Required fields are marked *