ಎಸಿಬಿ ದಾಳಿಗೊಳಗಾಗಿದ್ದ ನಾಗರಾಜ್ ಪತ್ನಿ ನಿಧನ

Public TV
1 Min Read

ನೆಲಮಂಗಳ(ಬೆಂಗಳೂರು): ಇತ್ತೀಚೆಗಷ್ಟೇ ಎಸಿಬಿ ದಾಳಿಗೊಳಗಾಗಿದ್ದ ಕೆಎಎಸ್ ಅಧಿಕಾರಿ ಎಲ್ ಸಿ ನಾಗರಾಜ್ ಅವರ ಪತ್ನಿ ಇಂದು ನಿಧನರಾಗಿದ್ದಾರೆ.

ತೀವ್ರ ಹೃದಯಾಘಾತದಿಂದ ನಾಗರತ್ನಮ್ಮ(53) ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ನೆಲಮಂಗಲ ಪರಮಣ್ಣ ಬಡಾವಣೆಯ ಮನೆಯ ಬಳಿ ನೀರವ ಮೌನ ಆವರಿಸಿದೆ.

ಎಲ್ ಸಿ ನಾಗರಾಜ್ ಅವರ ನೆಲಮಂಗಲ ಪರಮಣ್ಣ ಬಡಾವಣೆಯ ಮೇಲೆ ಇತ್ತೀಚೆಗೆ ಎಸಿಬಿ ದಾಳಿಯಾಗಿತ್ತು. ಐಎಂಎ ಪ್ರಕರಣದ ಆರೋಪಿಯೂ ಆಗಿರುವ ಕೆಎಎಸ್ ಅಧಿಕಾರಿ ಎಲ್.ಸಿ.ನಾಗರಾಜ್ ಹಾಗೂ ಸಂಬಂಧಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ನಗದು, ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಎಸ್.ಆರ್ ವಿಶ್ವನಾಥ್ ನೀಡಿದ್ದ ಎಚ್ಚರಿಕೆಯೇ ಕೊಲೆ ಸಂಚಿಗೆ ಕಾರಣವಾಯ್ತಾ..?

ಈ ಬಗ್ಗೆ ಮಾತನಾಡಿದ್ದ ನಾಗರಾಜ್, ಹಿರಿಯ ಅಧಿಕಾರಿಯೊಬ್ಬರು ಬೇಕಂತಲೇ ದಾಳಿ ಮಾಡಿದ್ದಾರೆ. ನಾನು ಪ್ರಮಾಣಿಕವಾಗಿ ಇದ್ದೇನೆ. ಪದೇ ಪದೇ ನನ್ನ ಮೇಲೆ ದಾಳಿ ಮಾಡಲಾಗುತ್ತಿದೆ. ದಾಳಿಗೆ ಭಯ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ನನ್ನನ್ನು ಗುರಿಯಾಗಿಸಿ ಇದು 3 ನೇ ಬಾರಿ ದಾಳಿ ಮಾಡಲಾಗಿದೆ. 43 ಲಕ್ಷ ರೂ. ಹಣಕ್ಕೆ ದಾಖಲಾತಿಗಳು ಇವೆ. ನನ್ನ ಪತ್ನಿಗೆ ಸಂಬಂಧಿಸಿದ ಆಸ್ತಿ ಮಾರಾಟ ಮಾಡಲು ಯತ್ನಿಸಿದ್ದೆ. 2.4 ಕೋಟಿಗೆ ಆಸ್ತಿ ಮಾರಾಟ ಮಾಡಿದ್ದೆ. ಅದರ ಹಣವನ್ನು ನಾನು ಪಡೆದಿದ್ದೆ. ಎಲ್ಲಾ ಕೂಡ ವೈಟ್ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

Share This Article
Leave a Comment

Leave a Reply

Your email address will not be published. Required fields are marked *