ಬೆಳಗಾವಿ: ತಮ್ಮದೇ ಜಿಲ್ಲೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಿಂದಲೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದಿದ್ದಾರೆ.
ಈ ಹಿಂದೆ ತಮ್ಮ ಸಿಡಿ ಬಿಡುಗಡೆ ನಂತರ ರಮೇಶ್ ಜಾರಕಿಹೊಳಿ ಅವರು ಸದನದಿಂದ ದೂರ ಉಳಿದು, ಸದನದ ಕಾರ್ಯಕಲಾಪಗಳಲ್ಲಿ ಭಾಗಿಯಾಗಿರಲಿಲ್ಲ. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸದನಗಳಿಗೂ ಗೈರಾಗಿದ್ದ ಅವರು ಇದೀಗ ಬೆಳಗಾವಿಯ ಅಧಿವೇಶನಕ್ಕೂ ಗೈರಾಗಿದ್ದಾರೆ. ಇದನ್ನೂ ಓದಿ: ಪ್ರತಿ ಮನೆಯಲ್ಲೂ ತಲ್ವಾರ್ ಇಟ್ಟುಕೊಂಡು ಗೋವು ರಕ್ಷಣೆ ಮಾಡಿ: ಸಾಧ್ವಿ ಸರಸ್ವತಿ
ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇತ್ತ ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ ತಟ್ಟುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೊರೊನಾ ನಿಯಂತ್ರಿಸಲು ಕ್ರಮ ಕೈಗೊಂಡಿದೆ. ಪ್ರತಿಭಟನೆ ನಡೆಸಲು ನಿರ್ಮಾಣ ಮಾಡಿರುವ ಟೆಂಟ್ ಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಸಿಬ್ಬಂದಿ ಟ್ರ್ಯಾಕ್ಟರ್ ಮೂಲಕ ಸ್ಯಾನಿಟೈಸರ್ ಸಿಂಪಡಿಸುತ್ತಿದ್ದಾರೆ.

 
			

 
		 
		 
                                
                              
		