ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 289 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 4 ಮರಣ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣ ಒಟ್ಟು ಸಂಖ್ಯೆ 7,449ಕ್ಕೆ ಏರಿಕೆ ಕಂಡಿದೆ.
ಇಂದು ಒಟ್ಟು 254 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,04,879 ಮಂದಿಗೆ ಕೊರೊನಾ ಬಂದಿದೆ. 39,59,982 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.38 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.49 ರಷ್ಟಿದೆ. ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 38ರಲ್ಲಿ ಸ್ಥಿರವಾಗಿದೆ. ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಮೈಸೂರು ಪೊಲೀಸರಿಂದ ವಿನೂತನ ಪ್ರಯತ್ನ – ಸ್ವಯಂ ಸೇವಕರಿಗೆ ಗುರುತಿನ ಚೀಟಿ
ಬೆಂಗಳೂರಿನಲ್ಲಿ 172 ಪಾಸಿಟಿವ್ ಕೇಸ್ ಮತ್ತು 2 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 2,22,573 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 58,495 ಸ್ಯಾಂಪಲ್ (ಆರ್ಟಿಪಿಸಿಆರ್ 48,374+10,121 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನೈಟ್ ಕರ್ಫ್ಯೂ ಮಾಡುವ ಬದಲು ಬೆಳಗ್ಗೆಯಿಂದಲೇ ಕರ್ಫ್ಯೂ ಜಾರಿ ಮಾಡಿ: ರೆಸಾರ್ಟ್ ಮಾಲೀಕರ ಅಕ್ರೋಶ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 172, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 12, ದಾವಣಗೆರೆ 4, ಧಾರವಾಡ 4, ಗದಗ 0, ಹಾಸನ 2, ಹಾವೇರಿ 0, ಕಲಬುರಗಿ 2, ಕೊಡಗು 37, ಕೋಲಾರ 10, ಕೊಪ್ಪಳ 0, ಮಂಡ್ಯ 1, ಮೈಸೂರು 7, ರಾಯಚೂರು 0, ರಾಮನಗರ 1, ಶಿವಮೊಗ್ಗ 1, ತುಮಕೂರು 15, ಉಡುಪಿ 7, ಉತ್ತರ ಕನ್ನಡ 8, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.