ಹೊಸ ವರ್ಷಕ್ಕೆ ಹೊಸ ಸಂತಸದ ಸುದ್ದಿ ಹಂಚಿಕೊಂಡ ರಿಷಬ್ ಶೆಟ್ಟಿ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಗರುಡ ಗಮನ ವೃಷಭವಾಹನ ಸಿನಿಮಾದ ಯಶಸ್ಸಿನ ಸಂತಸದಲ್ಲಿದ್ದಾರೆ. ಇದೀಗ ಹೊಸ ವರ್ಷದ ಆರಂಭದಲ್ಲಿ ಅಭಿಮಾನಿಗಳ ಜೊತೆಗೆ ಒಂದು ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಅವರು ಹೊಸ ವರ್ಷದ ಆರಂಭದಲ್ಲಿ ಹೊಸ ಸಿನಿಮಾ ಕುರಿತಾಗಿ ಅಪ್‍ಡೇಟ್ಸ್ ಕೊಡುತ್ತಾರೆ ಎಂದು ಅಭಿಮಾನಿಗಳು ಕಾದಿದ್ದರು. ಆದರೆ ಅವರ ಜೀವನದಲ್ಲಿ ಹೊಸ ಅತಿಥಿ ಆಗಮನವಾಗುತ್ತಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ.

ಹೊಸ ವರ್ಷಕ್ಕೆ ಹೊಸ ಸಂತಸವೊಂದು ನಮ್ಮ ಕುಟುಂಬದ ಜೊತೆಯಾಗಲಿದೆ. ರಣ್ವಿತ್ ಶೆಟ್ಟಿ ಸದ್ಯದಲ್ಲೇ ಅಣ್ಣನಾಗಲಿದ್ದಾನೆ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದವಿರಲಿ ಎಂದು ಬರೆದುಕೊಂಡು ಬೇಬಿ ಬಂಪ್ ಫೋಟೋವನ್ನು ಹಾಗೂ ಅವರ ಮುದ್ದಾದ ಕುಟುಂಬದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ನೋಡಿದ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ಶುಭಕೋರುತ್ತಿದ್ದಾರೆ.

2019 ಏಪ್ರಿಲ್ 7 ರಂದು ರಿಶಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ರಣ್ವಿತ್ ಶೆಟ್ಟಿ ಎಂದು ನಾಮಕರಣವನ್ನು ಮಾಡಿದ್ದಾರೆ. ಇದೀಗ ಈ ಕುಟುಂಬ 2ನೇ ಸದಸ್ಯನ ಆಗಮನದಲ್ಲಿ ಇದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು. ರಿಷಬ್ ಶೆಟ್ಟಿ ಅವರು ಹಿಟ್ ಸಿನಿಮಾಗಳನ್ನು ನೀಡಿತ್ತಾ ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೇ ಆಗಿರುವ ಚಾಪನ್ನು ಮೂಡಿಸಿದ್ದಾರೆ. ಇದನ್ನೂ ಓದಿ: RRR ಸಿನಿಮಾ ದೇಹವಾದರೆ ಅಜಯ್ ಆತ್ಮ, ಆಲಿಯಾ ಶಕ್ತಿ: ರಾಜಮೌಳಿ

Share This Article
Leave a Comment

Leave a Reply

Your email address will not be published. Required fields are marked *