ಕೋವಿಡ್-‌19 ಮನುಕುಲಕ್ಕೆ ಅಸಾಧಾರಣ ಸವಾಲಾಗಿದೆ: ರಾಷ್ಟ್ರಪತಿ

Public TV
1 Min Read

ನವದೆಹಲಿ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು 73ನೇ ಗಣರಾಜ್ಯೋತ್ಸವದ ಮುನ್ನಾ ದಿನದಂದು (ಜ.25) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.

ಗಣರಾಜ್ಯೋತ್ಸವವು ನಮ್ಮ ಭಾರತೀಯತೆಯನ್ನು ಆಚರಿಸುವ ಸಂದರ್ಭವಾಗಿದೆ. ಪ್ರಜಾಪ್ರಭುತ್ವ, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವು ನಮ್ಮ ಗಣರಾಜ್ಯ ನಿಂತಿರುವ ತಳಹದಿಯಾಗಿದೆ ಎಂದು ಕೋವಿಂದ್‌ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬಿಪಿನ್‌ ರಾವತ್‌ಗೆ ಪದ್ಮವಿಭೂಷಣ – ರಾಜ್ಯದ ಐವರಿಗೆ ಪದ್ಮಶ್ರೀ

ಕೊರೊನಾ ವೈರಸ್‌ ಸಾಂಕ್ರಾಮಿಕವು ಮನುಕುಲಕ್ಕೆ ಅಸಾಧಾರಣ ಸವಾಲಾಗಿದೆ. ಕೊರೊನಾ ವೈರಸ್‌ ವಿರುದ್ಧ ನಾವು ಸಾಟಿಯಿಲ್ಲದ ಶಕ್ತಿ ಪ್ರದರ್ಶನ ಮಾಡಿದ್ದೇವೆ ಎಂದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ನಾವು ಜಾಗರೂಕರಾಗಿರಬೇಕು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮುಂದುವರಿಯಬೇಕು ಎಂದು ಸಲಹೆ ನೀಡಿದ್ದಾರೆ.

ವೈದ್ಯರು, ಶುಶ್ರೂಷಾಧಿಕಾರಿಗಳು, ಅರೆ ವೈದ್ಯರು ಸವಾಲಾಗಿ ಸ್ವೀಕರಿಸಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದ್ದರೂ ಕಠಿಣ ಪರಿಸ್ಥಿತಿಯಲ್ಲಿ ದೀರ್ಘಕಾಲ ಕೆಲಸ ಮಾಡುತ್ತಿದ್ದಾರೆ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಚೋಪ್ರಾಗೆ ಪರಮ ವಿಶಿಷ್ಟ ಸೇವಾ ಪದಕ

ಭವಿಷ್ಯದ ಸವಾಲುಗಳನ್ನು ಎದುರಿಸಲು ಭಾರತ ಇಂದು ಉತ್ತಮ ಸ್ಥಾನದಲ್ಲಿದೆ. ಭಾರತವು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುವುದನ್ನು ಮುಂದುವರಿಸುತ್ತದೆ. ಜಾಗತಿಕ ಸಮುದಾಯದಲ್ಲಿ ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಯೋಗ್ಯ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತದೆ ಎಂದು ರಾಷ್ಟ್ರಪತಿ ಅಭಿಪ್ರಾಯಪಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *