Wait and see, ಸಮಯ ಬಂದಾಗ ಎಲ್ಲಾ ಹೇಳುತ್ತೇನೆ: ಎಸ್.ಆರ್.ಪಾಟೀಲ್

Public TV
2 Min Read

ಹುಬ್ಬಳ್ಳಿ: ಸಮಯ ಸಂದರ್ಭದಲ್ಲಿ ಎಲ್ಲಾ ಹೇಳುತ್ತೇನೆ. ವೇಟ್ ಆಂಡ್ ಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಸಿಎಂ ಇಬ್ರಾಹಿಂ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, ನನಗೆ ಇಲ್ಲಿಗೆ ಬಂದು ಇಬ್ರಾಹಿಂ ಜೊತೆಗೆ ಯಾರೂ ಮಾತನಾಡಲು ಹೇಳಿಲ್ಲ, ನಾನು ಸ್ವ ಇಚ್ಛೆಯಿಂದ ಪಕ್ಷದ ಹಿತದೃಷ್ಟಿಯಿಂದ ಮತ್ತು ಸ್ನೇಹಿತನ ನೋವನ್ನು ಆಲಿಸಲು ಬಂದಿದ್ದೇನೆ ಎಂದು ತಿಳಿಸಿದರು.

ಇಬ್ರಾಹಿಂ ಅವರು ವಿಪಕ್ಷ ನಾಯಕನಾಗುವ ಆಸೆಯಿಟ್ಟುಕೊಂಡಿದ್ದರು. ಅವರು ಪಕ್ಷದಲ್ಲಿ ಇರಬೇಕು ಎಂದು ಮನವಿ ಮಾಡಿದ್ದೇನೆ. ಆದರೆ ಅವರು ಅದಕ್ಕೆ ಒಪ್ಪಲಿಲ್ಲ. ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಜನರ ಅಭಿಪ್ರಾಯ ಪಡೆದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ನನಗೆ ಸದ್ಯ ಯಾವುದೇ ಅಸಮಾಧಾನ ಇಲ್ಲ ಎಂದರು. ಇದನ್ನೂ ಓದಿ: ಲೂಟಿ ಮಾಡಿರುವ ದುಡ್ಡಿದ್ದರೆ ಹೊಸ ಪಕ್ಷ ಮಾಡುತ್ತಿದ್ದೆವು: ಯತ್ನಾಳ್

ಚುನಾವಣೆ ಸಮಯದಲ್ಲಿ ಒಬ್ಬ ಕಾರ್ಯಕರ್ತ ಪಕ್ಷ ಬಿಟ್ಟು ಹೋಗಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ಮುಗಿದ ಅಧ್ಯಾಯ: ಎಸ್‍ಆರ್ ಪಾಟೀಲ್ ಅವರು ನನ್ನನ್ನು ಪಕ್ಷದಲ್ಲಿ ಇರಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಅದು ಮುಗಿದ ಅಧ್ಯಾಯ. ಒಂದು ಸಲ ಡ್ಯಾಂ ಒಡೆದು ನೀರು ಹರಿದು ಹೋದರೆ ಮುಗಿಯಿತು ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿಕೆ ನೀಡಿ ಪಕ್ಷಕ್ಕೆ ಮರಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ನಮಗೆ ನಮ್ಮ ಜವಾಬ್ದಾರಿಯ ಅರಿವಿದೆ – ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನನ್ನ ಜೊತೆಗೆ ಬಹಳಷ್ಟು ದೊಡ್ಡವರ ಬೆಂಬಲವಿದೆ. ಕಾಂಗ್ರೆಸ್‍ನವರು ನನ್ನ ಜೊತೆಗಿದ್ದಾರೆ. ಆದರೆ ಅವರ ಹೆಸರನ್ನು ಹೇಳಲ್ಲ. ಅದಕ್ಕೆ ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದೆನೆ ಎಂದರು.

ಅಲ್ಪಸಂಖ್ಯಾತ ಲಿಂಗಾಯತ ಚಳುವಳಿ ವಿಜಯಪುರದಿಂದ ಆರಂಭ ಮಾಡುತ್ತೇವೆ. ಚಳುವಳಿಗೆ ಎಸ್‍ಆರ್ ಪಾಟೀಲ್ ಬರುತ್ತಾರೆ ಎಂದು ತಿಳಿಸಿದ್ದಾರೆ. ಎಸ್‍ಆರ್‍ಪಾಟೀಲ್ ಕಾಂಗ್ರೆಸ್ ಬಿಟ್ಟು ಬರುತ್ತಾರಾ ಎಂದು ಕಾದುನೋಡಿ ಎಂದರು. ಇದನ್ನೂ ಓದಿ: ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

ಐದಾರು ದಿನಗಳಲ್ಲಿ ಕೊಪ್ಪಳ, ಕಲಬುರಗಿ, ಬಳ್ಳಾರಿ, ರಾಯಚೂರು ಮತ್ತು ಬೆಳಗಾವಿ ಪ್ರವಾಸ ಮಾಡಲಿದ್ದೇನೆ. ನಾನು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚು ಬೆಂಬಲ ಸಿಗುತ್ತಿದೆ. ನನಗೆ ಸಿದ್ಧರಾಮಯ್ಯರಿಂದ ಯಾವುದೇ ಫೋನ್ ಕಾಲ್ ಬಂದಿಲ್ಲ. ಅದನ್ನು ನಾನು ನಿರೀಕ್ಷೆ ಕೂಡಾ ಮಾಡುವುದಿಲ್ಲ. ನನಗೆ ಜೆಡಿಎಸ್, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್‍ರ ಮೇಲೆ ಒಲವು ಇದೆ ಎಂದು ಸ್ಪಷ್ಟನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *