ಟೋಲ್‍ನಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ದುರ್ಮರಣ

Public TV
1 Min Read

ಚಿತ್ರದುರ್ಗ: ಟ್ಯಾಂಕರ್‌ಗೆ  ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಈ ಅವಘಡ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಗೇಟ್‍ಲ್ಲಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು ರಮೇಶ್(55) ವಿಶ್ವನಾಥ್(65) ಹಾಗೂ ಸೀಮಾ(45) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಬೆಳಗಾವಿ ಮೂಲದವರು ಎಂದು ಹೇಳಲಾಗಿದೆ.

ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ. ಟೋಲ್ ಗೇಟ್ ನಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಅಪಘಾತದ ದೃಶ್ಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿರುವ ಗುಯಿಲಾಳ್ ಟೋಲ್‍ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪತಿಯನ್ನು ಹರಾಜಿಗಿಟ್ಟು, ಯಾವುದೇ ಕಾರಣಕ್ಕೂ Exchange ಇಲ್ಲವೆಂದ ಪತ್ನಿ..!

ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿರುವುದೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅತಿವೇಗದ ದೃಶ್ಯ ಕಂಡು ಟೋಲ್ ಸಿಬ್ಬಂದಿಯೇ ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *