ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಯತ್ನ: ಸಂಜಯ್ ರಾವತ್

Public TV
1 Min Read

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಶಿವಸೇನಾ ಸಂಸದ ಸಂಜಯ್ ರಾವತ್ ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾವತ್, ಕೆಲವು ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿ, ಅವರು ಪಕ್ಷವನ್ನು ಬದಲಿಸುವಂತೆ ಒತ್ತಾಯಿಸಿದ್ದಾರೆ ಜೊತೆಗೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಸುಮಾರು 20 ದಿನಗಳ ಹಿಂದೆ ಬಿಜೆಪಿಯ ಕೆಲವು ಹಿರಿಯ ನಾಯಕರು ನನ್ನನ್ನು ಮೂರು ಬಾರಿ ಭೇಟಿ ಮಾಡಿದ್ದರು. ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಸಹಾಯ ಮಾಡುವಂತೆ ಹೇಳಿದ್ದರು. ರಾಜ್ಯದಲ್ಲಿ ಅವರು ರಾಷ್ಟ್ರಪತಿ ಆಳ್ವಿಕೆ ತರಲು ಪ್ರಯತ್ನಿಸುತ್ತಿದ್ದಾರೆ. ಅದು ಸಾಧ್ಯವಾಗಿಲ್ಲವೆಂದರೆ ಕೆಲವು ಶಾಸಕರನ್ನು ಪಕ್ಷಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವರು ನನ್ನ ಸಹಾಯ ಕೇಳಿದ್ದಾರೆ ಎಂದು ಆರೋಪಿಸಿದರು.

ನಾನು ಸಹಾಯ ಮಾಡದಿದ್ದರೆ, ಕೇಂದ್ರೀಯ ಏಜೆನ್ಸಿಗಳು ನನ್ನನ್ನು ಸರಿಪಡಿಸುತ್ತವೆ ಮತ್ತು ನಂತರ ನಾನು ನನ್ನ ನಿರ್ಧಾರಕ್ಕೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ನನಗೆ ಬೆದರಿಕೆವೊಡ್ಡಿದ್ದಾರೆ. ಇದರಿಂದಾಗಿಯೆ ಶರದ್ ಪವಾರ್ ಕುಟುಂಬವು ತನಿಖಾ ಸಂಸ್ಥೆಗಳ ದಾಳಿಗಳನ್ನು ಎದುರಿಸುತ್ತಿದೆ ಎಂದು ಬಿಜೆಪಿಯವರೇ ತಿಳಿಸಿದ್ದಾರೆ. ಆದರೆ ಇಂತಹ ಒತ್ತಡ ತಂತ್ರಗಳ ಮುಂದೆ ಮಹಾರಾಷ್ಟ್ರ ಸರ್ಕಾರ ತಲೆಬಾಗುವುದಿಲ್ಲ ಎಂದರು. ದನ್ನೂ ಓದಿ: ಬಿಜೆಪಿ ಬೆಂಗಾವಲು ಪಡೆ ಮೇಲೆ ಎಸ್‍ಪಿ ಗೂಂಡಾಗಳಿಂದ ದಾಳಿ: ಕೇಶವ್ ಪ್ರಸಾದ್ ಮೌರ್ಯ

ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಆದರೆ ನಾವು ಇದಕ್ಕೆಲ್ಲಾ ಹೆದರುವುದಿಲ್ಲ. ನಾವು ಇದನ್ನು ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರಿಂದ ಕಲಿತಿದ್ದೇವೆ ಎಂದು ಹೇಳಿದರು. ದನ್ನೂ ಓದಿ: ಟರ್ಬನ್ ಧರಿಸಿದವರೆಲ್ಲಾ ‘ಸರ್ದಾರ್’ ಆಗೋದಿಲ್ಲ: ಪ್ರಿಯಾಂಕಾ ಗಾಂಧಿ

ಇದೇ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಸಂಸದ ಕಿರಿತ್ ಸೋಮಯ್ಯ ಅವರ ಪುತ್ರ ನೀಲ್ ಸೋಮಯ್ಯ ಅವರು ಪಿಎಂಸಿ ಬ್ಯಾಂಕ್ ವಂಚನೆಯ ಆರೋಪಿ ರಾಕೇಶ್ ವಾಧವನ್ ಅವರ ವ್ಯಾಪಾರ ಪಾಲುದಾರರಾಗಿದ್ದಾರೆ. ಈ ಪ್ರಕರಣದಲ್ಲಿ ಕ್ರಮ ಜರಿಗಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸುತ್ತೇವೆ ಎಂದು ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *