ಹರ್ಷ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ನೀಡಿ-ಸರ್ಕಾರಕ್ಕೆ ಶ್ರೀರಾಮ ಸೇನೆ ಒತ್ತಾಯ

Public TV
1 Min Read

ಬೆಳಗಾವಿ: ನಿನ್ನೆ ಮೃತನಾದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಖಂಡಿಸಿ ಶ್ರೀರಾಮ ಸೇನಾ ಜಿಲ್ಲಾ ಘಟಕ, ಹಿಂದೂ ರಾಷ್ಟ್ರ ಸೇನೆಯ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಪರ್ ಜಿಲ್ಲಾಧಿಕಾರಿ ಅಶೋಕ್‌ ದುಡಗುಂಟಿ ಅವರು ಈ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನು ಅತ್ಯಂತ ಭೀಕರ, ರಾಕ್ಷಸಿವಾಗಿ ಹತ್ಯೆ ಮಾಡಲಾಗಿದೆ. ಆ ಯುವಕನ ಹತ್ಯೆಗೆ ಕಳೆದ ಹಲವು ವರ್ಷಗಳಿಂದ ಎಸ್.ಡಿ.ಪಿ.ಐ, ಪಿ.ಎಫ್.ಐ, ಸಿ.ಎಫ್.ಐ ಸಂಘಟನೆಗಳು ಪ್ರಯತ್ನ ನಡೆದಿದೆ. ಆದ್ದರಿಂದ ಈ ಸಂಘಟನೆಗಳನ್ನು ನಿಷೇಧಿಸಿ, ಪ್ರಮುಖರನ್ನು ಬಂಧಿಸಬೇಕು. ಹತ್ಯೆಯ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ಉಗ್ರ ಶಿಕ್ಷೆಯಾಗಬೇಕು. ಸರ್ಕಾರ ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.  ಇದನ್ನೂ ಓದಿ: ಉಕ್ರೇನ್ ಉದ್ವಿಗ್ನತೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಭಾರತ ಆತಂಕ

ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಹಿಂದೂ ಕಾರ್ಯಕರ್ತರಿಗೆ ಹಾಗೂ ಹಿಂದೂ ನಾಯಕರಿಗೆ ಸೂಕ್ತ ಭದ್ರತೆ ಒದಗಿಸಬೇಕು. ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸದಿದ್ದರೇ ಉಗ್ರ ಹೋರಾಟ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ, ಜಿಲ್ಲಾ ಕಾರ್ಯಧ್ಯಕ್ಷ ವಿನಯ ಅಂಗ್ರೋಳ್ಳಿ, ನಾಗೇಶ ಷರಾಫ್, ವಿನೋದ್ ಹಂಗರೇಕರ, ಅಕ್ಷಯ ಪಾಟೀಲ್‌, ಸಂತೋಷ್ ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *