ನನ್ನ ನಗರ ನನ್ನ ಬಜೆಟ್ ಅಭಿಯಾನಕ್ಕೆ ಚಾಲನೆ

By
2 Min Read

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಹಯೋಗದೊಂದಿಗೆ ಜನಾಗ್ರಹ ಪ್ರತಿಷ್ಠಾನವು ವಾರ್ಷಿಕ ನಗರ ಬಜೆಟ್‍ಗಾಗಿ ಸಾರ್ವಜನಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಈ ಬಾರಿ ವಿಶೇಷವಾಗಿ ಉದ್ಯಾನವನ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಾಗರಿಕರ ಪ್ರತಿಕ್ರಿಯೆ ಪಡೆಯುವ ಅಭಿಯಾನಕ್ಕೆ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಚಾಲನೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರು ಮಾತನಾಡಿದ್ದು, ಜನಾಗ್ರಹ ಪ್ರತಿಷ್ಠಾನದ ಮೂಲಕ ‘ನನ್ನ ನಗರ ನನ್ನ ಬಜೆಟ್’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. 2015 ರಿಂದಲೂ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದ್ದು, ಆ ಮೂಲಕ ನಗರದ ಬಜೆಟ್‍ನಲ್ಲಿ ಜನರು ಭಾಗವಹಿಸುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು

ನನ್ನ ನಗರ ನನ್ನ ಬಜೆಟ್' ಬಸ್‌ಗೆ ಚಾಲನೆ | Prajavani

‘ಮೈ ಸಿಟಿ ಮೈ ಬಜೆಟ್’ ವಾಹನವು ಎಲ್ಲ ವಾರ್ಡ್‍ಗಳಿಗೆ ತೆರಳಿ ನಾಗರಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಕಳೆದ ಬಾರಿ ಪಾದಚಾರಿ ಮಾರ್ಗ ಮತ್ತು ಯೆಲ್ಲೋ ಸ್ಪಾಟ್(ತೆರೆದ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ) ಬಗ್ಗೆ ಗಮನ ಹರಿಸಲಾಗಿತ್ತು. ಈ ಬಾರಿ ಉದ್ಯಾನವನ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಾಗರಿಕರ ಸಲಹೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.

ಇಂತಹ ಕಾರ್ಯಕ್ರಮ ಸಕ್ರಿಯವಾಗಿ ನಡೆಯಲಿ. ಇತರ ದೊಡ್ಡ-ದೊಡ್ಡ ಮಹಾನಗರಗಳಿಗೆ ಹೋಲಿಸಿದರೆ ಪಾಲ್ಗೊಳ್ಳುವಿಕೆಯಲ್ಲಿ ಬೆಂಗಳೂರು ಸಾಕಷ್ಟು ಮುಂದಿದೆ. ನಗರದಲ್ಲಿ ವಾರ್ಡ್ ಸಮಿತಿಗಳು ಕೂಡ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ ವರ್ಷದ ಆಯವ್ಯಯದಲ್ಲಿ ಪ್ರತಿ ವಾರ್ಡ್‍ಗೆ 60 ಲಕ್ಷ ರೂ. ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿಡಲಾಗಿತ್ತು. ಇದನ್ನು ಮುಂದುವರಿಸಿಕೊಂಡು ಹೋಗುವ ಅವಶ್ಯಕತೆ ಇದೆ ಎಂದು ಹೇಳಿದರು.

‘ಮೈ ಸಿಟಿ ಮೈ ಬಜೆಟ್’ ಅಭಿಯಾನವು ವಿವಿಧ ಎನ್.ಜಿ.ಒ, ಆರ್.ಡಬ್ಲ್ಯೂ.ಎಗಳು ಸೇರಿದಂತೆ 40ಕ್ಕೂ ಹೆಚ್ಚು ಸಂಸ್ಥೆಗಳ ಸಹಯೋಗದಲ್ಲಿ ಮಾರ್ಚ್ 15 ರವರೆಗೆ ನಡೆಯಲಿದೆ. ಬಜೆಟ್ ವಾಹನವು ನಗರದ ಎಲ್ಲ ವಾರ್ಡ್‍ಗಳಲ್ಲಿ ಸಂಚರಿಸಿ ನಾಗರಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಇದಲ್ಲದೆ ವೆಬ್‌ಸೈಟ್ http://mycitymybudget.in/ ಗೆ ನಾಗರಿಕರು ಭೇಟಿ ನೀಡಿ ಅಭಿಪ್ರಾಯಗಳನ್ನು ತಿಳಿಸಬಹುದು ಎಂದರು. ಇದನ್ನೂ ಓದಿ:  ನಯನತಾರಾ ಜೊತೆಗಿನ ಫೋಟೋ ಹಂಚಿಕೊಂಡ ಸಮಂತಾ – ಕುಚಿಕು ಗೆಳೆತಿಯರ ಫೋಟೋ ಕಹಾನಿ

Share This Article
Leave a Comment

Leave a Reply

Your email address will not be published. Required fields are marked *