ಮೇಕೆದಾಟು ಹೋರಾಟವಲ್ಲ, ಅದು ರಾಜಕೀಯ ಪಾದಯಾತ್ರೆ : ಸಿಎಂ ವ್ಯಂಗ್ಯ

By
1 Min Read

ಹುಬ್ಬಳ್ಳಿ: ಕಾಂಗ್ರೆಸ್ ಮೇಕೆದಾಟು ಹೋರಾಟ ಮಾಡುವುದು ಅವರ ರಾಜಕೀಯ ಲಾಭಕ್ಕೆ. ಅವರಿಗೆ ಯಾವ ನೈತಿಕತೆಯಿದೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ಎಸ್‍ಡಿಪಿಐ ಮತ್ತು ಪಿಎಫ್‍ಐ ಬ್ಯಾನ್ ವಿಚಾರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಹಲವಾರು ಘಟನೆಗಳು ಸೇರಿ, ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಶಾಂತಿ ಕದಡುವುದು, ಮತೀಯ ದ್ವೇಷ ಬಿತ್ತುವಂತದ್ದನ್ನ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಹಿರಿಯ ಪೆÇಲೀಸ್ ಅಧಿಕಾರಿಗಳು ಈ ಕುರಿತು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಅದರ ಆಧಾರದ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

ಕಾಂಗ್ರೆಸ್ ಮೇಕೆದಾಟು ಹೋರಾಟ ಅದು ರಾಜಕೀಯ ಪಾದಯಾತ್ರೆ. ಅವರು ಮೊದಲು ಮಾಡಿದ್ದು ಅದನ್ನೇ, ಈಗ ಮಾಡೋದು ಅದನ್ನೆ. ಅವರ ಕಾಲದಲ್ಲಿ ಡಿಪಿಆರ್ ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ ಬಂದ ಮೇಲೆ ಡಿಪಿಆರ್ ಸಿದ್ಧವಾಯ್ತು. ಹೀಗಾಗಿ ಯಾವ ನೈತಿಕ ಆಧಾರದ ಮೇಲೆ ಹೀಗೆ ಹೇಳ್ತಾರೆ ಎಂದು ವ್ಯಂಗ್ಯವಾಡಿದರು.

ಉಕ್ರೇನ್ ನಲ್ಲಿ ವಿದ್ಯಾರ್ಥಿಗಳು ಸಿಲುಕಿದ ವಿಚಾರವಾಗಿ, ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಪೂರ್ವಭಾಗದಲ್ಲೇ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಯುದ್ಧದ ತೀವ್ರಾತೆ ಕಡಿಮೆ ಆದ ತಕ್ಷಣ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಈಗಾಗಲೇ ಕೇಂದ್ರ ವಿದೇಶಾಂಗ ಸಚಿವರು ಸಂಪರ್ಕದಲ್ಲಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ:  ಉಕ್ರೇನ್‍ನಿಂದ ತಾಯ್ನಾಡಿಗೆ ಬಂದ್ರು ಭಾರತೀಯರು – ಮುಂಬೈನಲ್ಲಿ ವಿಮಾನ ಲ್ಯಾಂಡಿಂಗ್

Share This Article
Leave a Comment

Leave a Reply

Your email address will not be published. Required fields are marked *