ಬಿಸಿಯೂಟ ತಯಾರಕರಿಗೆ 1,000 ರೂ. ಗೌರವಧನ ಹೆಚ್ಚಳ

Public TV
1 Min Read

ಬೆಂಗಳೂರು: ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ಗೌರವಧನವನ್ನು 1,000 ರೂ.ಗಳಷ್ಟು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಬೊಮ್ಮಾಯಿ ಅವರು, ಅಕ್ಷರ ದಾಸೋಹ ಯೋಜನೆಯಡಿ ಬಿಸಿಯೂಟ ಕಾರ್ಯಕರ್ತರ ಸೇವೆಯನ್ನು ಗುರುತಿಸಿ ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ನೀಡುವ ಗೌರವಧನವನ್ನು 1,000 ರೂ.ಗಳಷ್ಟು ಹೆಚ್ಚಿಸಲಾಗುವುದು ಘೋಷಿಸಿದರು.

ಬಜೆಟ್‍ನಲ್ಲಿ ಏನಿದೆ?
* ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ರಾಷ್ಟ್ರದಲ್ಲಿ ಜಾರಿಗೊಳಿಸಿದ ಮೊದಲ ರಾಜ್ಯ ನಮ್ಮದಾಗಿದೆ. ಉನ್ನತ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದಕ್ಕೆ ನಮ್ಮ ಸರ್ಕಾರವು ಬದ್ಧವಾಗಿದೆ. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

* ಅತ್ಯುನ್ನತ ಗುಣಮಟ್ಟದ ತಾಂತ್ರಿಕ ಬೋಧನೆ-ಕಲಿಕೆಗಳಿಗೆ ಹಾಗೂ ಸಂಶೋಧನೆಯನ್ನು ಉತ್ತೇಜಿಸಲು ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು Karnataka Institute of Technology ಗಳನ್ನಾಗಿ ಉನ್ನತೀಕರಿಸಿ, ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು.

* ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳನ್ನು ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು. ಈ ವಿಶ್ವವಿದ್ಯಾಲಯಗಳು ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೇ ಕಾರ್ಯನಿರ್ವಹಿಸಲಿದೆ. ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸುವ ಈ ವಿಶ್ವವಿದ್ಯಾಲಯಗಳಿಗೆ ವಾರ್ಷಿಕ ತಲಾ 2 ಕೋಟಿ ರೂ.ಗಳ ಆವರ್ತಕ ವೆಚ್ಚ ಬಳಸಿ ಕಾರ್ಯನಿರ್ವಹಿಸಲಿವೆ. ಇದನ್ನೂ ಓದಿ: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ.: ಬೊಮ್ಮಾಯಿ

* ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು ಹೆಚ್ಚಿಸಿ ಮಾಸಿಕ ಗೌರವಧನವನ್ನು ಹಾಲಿ 11,000 ರೂ. ಗಳಿಂದ 32,000 ರೂ. ವರೆಗೆ ಹೆಚ್ಚಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *