ಕಾಮನ್ ಮ್ಯಾನ್ ಸಿಎಂ ಎನ್ನುವುದನ್ನು ಬೊಮ್ಮಾಯಿ ಮತ್ತೆ ನಿಜ ಮಾಡಿದ್ದಾರೆ: ಪ್ರತಾಪ್‍ಸಿಂಹ

Public TV
2 Min Read

ಮೈಸೂರು: ತಾವು ಕಾಮನ್ ಮ್ಯಾನ್ ಸಿಎಂ ಎನ್ನುವುದನ್ನು ಬಸವರಾಜ ಬೊಮ್ಮಾಯಿ ಮತ್ತೆ ನಿಜ ಮಾಡಿದ್ದಾರೆ ಎಂದು ಸಂಸದ ಪ್ರತಾಪ್‍ಸಿಂಹ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರು ಜನಪರವಾದ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿ ಇಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ. ಮೈಸೂರಿಗೆ ಹೆಚ್ಚಿನ ಕೊಡುಗೆ ಕೊಟ್ಟಿದ್ದಾರೆ. ಇದು ಸರ್ವ ವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಆಗಿದೆ. ಸಂಸದನಾಗಿ ನನಗೆ ಅತಿ ಹೆಚ್ಚು ಖುಷಿ ತಂದಿದೆ ಎಂದು ತಿಳಿಸಿದರು.

ಕೆ.ಆರ್. ಆಸ್ಪತ್ರೆಯ ಉನ್ನತೀಕರಣಕ್ಕೆ ಅನುದಾನ: ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ಹಣ ಕೇಳಿದ್ದೆ. ಈಗ ಆ ಹಣ ನೀಡಿದ್ದಾರೆ. ಹೆಚ್ಚು ಕಡಿಮೆ 400 ಕೋಟಿ ರೂ. ಯೋಜನೆ ಇದಾಗಿದೆ. ಕೆ.ಆರ್. ಆಸ್ಪತ್ರೆಯ ಉನ್ನತೀಕರಣಕ್ಕೆ ಹಣ ನೀಡುವಂತೆ ಕೇಳಿದ್ದೆ. ಬಜೆಟ್‍ನಲ್ಲಿ ಅದಕ್ಕೆ 89 ಕೋಟಿ ರೂ. ನಿಗದಿ ಮಾಡಿದ್ದಾರೆ. ನನ್ನ ಮನವಿಗಳಿಗೆ ಸಿಎಂ ಸ್ಪಂದಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಆದರೆ ಕೆ.ಆರ್. ಆಸ್ಪತ್ರೆಯ ಉನ್ನತೀಕರಣಕ್ಕೆ ಹಣ ಕೊಟ್ಟಿರಲಿಲ್ಲ. ಆದರೆ, ಬಸವರಾಜ ಬೊಮ್ಮಾಯಿ ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೀನುಗಾರಿಕೆಗೆ ಬೆಂಬಲ – ಮತ್ಸ್ಯ ಸಿರಿ ಯೋಜನೆ ಆರಂಭ

ಮೈಸೂರಿಗೆ ಅಭಿವೃದ್ಧಿ ವಿಚಾರದಲ್ಲಿ ಗ್ರಹಣ ಹಿಡಿದಿತ್ತು. ಈ ಗ್ರಹಣವನ್ನು ಬೊಮ್ಮಾಯಿ ಬಿಡಿಸಿದ್ದಾರೆ. 2023ರಲ್ಲೂ ಬಿಜೆಪಿ ಯಾಕೆ ಗೆಲ್ಲಿಸಬೇಕು. ಬೊಮ್ಮಾಯಿ ಅವರೆ ಸಿಎಂ ಆಗಬೇಕು ಎಂಬುದಕ್ಕೆ ಈ ಬಜೆಟ್ ಉತ್ತರವಾಗಿದೆ. ಜನ ಈ ಬಜೆಟ್ ನೋಡಿ ಖಂಡಿತ ಬಿಜೆಪಿಗೆ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆ.ಆರ್ ಆಸ್ಪತ್ರೆಯ ಉನ್ನತೀಕರಣಕ್ಕೆ ಹಣ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಇದರ ಕ್ರೇಡಿಟ್ ಸ್ಥಳೀಯ ಬಿಜೆಪಿ ಶಾಸಕರಿಗೋ ಅಥವಾ ನನಗೆ ಸಲ್ಲಬೇಕು ಎಂಬುದೇನೂ ಇಲ್ಲ. ಇದರ ಒಟ್ಟಾರೆ ಕ್ರೇಡಿಟ್ ಬಿಜೆಪಿ ಸರ್ಕಾರಕ್ಕೆ ಸಲುತ್ತದೆ. ಏನೇ ಅಭಿವೃದ್ಧಿ ಅದರೂ ಅದರ ಕ್ರೇಡಿಟ್ ಬಿಜೆಪಿ ಸರ್ಕಾರಕ್ಕೆ ಸಲುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: 1 ರೂ. ಬಂದಿದ್ದು ಹೇಗೆ? ಹೋಗಿದ್ದು ಹೇಗೆ? – ಯಾವ ವಲಯಕ್ಕೆ ಎಷ್ಟು ಕೋಟಿ?

ರಿಸ್ಕ್ ತೆಗೆದುಕೊಂಡು ಮೋದಿಯಿಂದ ಜನರ ರಕ್ಷಣೆ: ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೋದಿ ಅವರಿಗೆ ಗಟ್ಸ್ ಇರುವುದಕ್ಕೆ ರಿಸ್ಕ್ ತೆಗೆದುಕೊಂಡು ದೇಶದ ಜನರನ್ನು ಉಕ್ರೇನ್‍ನಿಂದ ರಕ್ಷಿಸುತ್ತಿದ್ದಾರೆ. ರಕ್ಷಣಾ ಕಾರ್ಯ ಬಹಳ ಚುರುಕಾಗಿ ನಡೆಯುತ್ತಿದೆ. ಉಕ್ರೇನ್ ಗಡಿ ದಾಟಿದ ಕೂಡಲೇ ಅಲ್ಲಿಂದ ಸುರಕ್ಷಿತವಾಗಿ ಕರೆದುಕೊಂಡು ಬರುತ್ತಿದ್ದೇವೆ. ಉಕ್ರೇನ್‍ನಿಂದ ಹೊರಡಿ ಎಂದು ಮೂರು ಬಾರಿ ಸಲಹೆ ಕೊಟ್ಟಿದ್ದೇವು. ಆದರೆ ಯಾರು ಕೇಳಲಿಲ್ಲ. ತೆರಿಗೆ ಹಣದಿಂದ ಅವರನ್ನು ವಿಮಾನದಲ್ಲಿ ಕರೆದುಕೊಂಡು ಬರಲಾಗಿದೆ. ಕೆಲವರು ಕೃತಜ್ಞತೆ ಇಲ್ಲದೆ ಮಾತಾಡಿದ್ದಾರೆ. ಅವರ ಮಟ್ಟಕ್ಕೆ ಇಳಿದು ನಾನು ಅವರನ್ನು ಟೀಕೆ ಮಾಡಲ್ಲ ಎಂದು ವಾಗ್ದಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *