ಪಬ್ಲಿಕ್ ಪ್ಲೇಸ್‍ನಲ್ಲಿ ಪೊಲೀಸ್‍ಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

Public TV
1 Min Read

ಲಕ್ನೋ: ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸ್‍ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಲಕ್ನೋದ ಚಾರ್ ಬಾಗ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋದಲ್ಲಿ ಪೊಲೀಸ್, ಒಬ್ಬ ವ್ಯಕ್ತಿ ಮತ್ತು ಮಹಿಳೆ ನಡುವೆ ಮಾರಾಮಾರಿ ನಡೆದಿರುವುದನ್ನು ಕಾಣಬಹುದಾಗಿದೆ. ಮಹಿಳೆ ತನ್ನ ಚಪ್ಪಲಿಯಿಂದ ಪೊಲೀಸ್ ಮೇಲೆ ಹಲ್ಲೆ ನಡೆಸಿದಾಗ, ಮಹಿಳೆಯನ್ನು ಪೊಲೀಸ್ ದೂರಕ್ಕೆ ತಳ್ಳಿ, ವ್ಯಕ್ತಿಗೆ ಲಾಠಿಯಿಂದ ಹೊಡೆಯುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಪ್ರಕಾಶ್ ರೈ ಮಾಡಿದ ಟ್ವೀಟ್ ಗೆ ಜಗ್ಗಾಟ ಶುರು

ದಾರಿಹೋಕರೊಬ್ಬರು ಈ ವೀಡಿಯೋವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೆ ಕೆಲವರು ಪೊಲೀಸ್ ಮದ್ಯ ಸೇವಿಸಿದ್ದಾರೆ ಎಂದು ಪ್ರಶ್ನಿಸಿದ್ದರೆ, ಇನ್ನೂ ಕೆಲವರು ಪೊಲೀಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಪಂಡಿತರ ಹತ್ಯಾಕಾಂಡ – ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಿ: ರಾಷ್ಟ್ರಪತಿಗಳಿಗೆ ಪತ್ರ

Share This Article
Leave a Comment

Leave a Reply

Your email address will not be published. Required fields are marked *