ಕೆಐಎಡಿಬಿ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡ ಎಂದವರಿಗೆ ಅಭಿವೃದ್ಧಿಪಡಿಸಿದ ಭೂಮಿ: ನಿರಾಣಿ

By
1 Min Read

– ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ
– ಪರ್ಯಾಯ ಭೂಮಿ ನೀಡುವ ವ್ಯವಸ್ಥೆ ದೇಶದಲ್ಲಿ ಬೇರೆಲ್ಲಿಯೂ ಜಾರಿಯಲ್ಲಿಲ್ಲ

ಬೆಂಗಳೂರು: ಕೆಐಡಿಬಿಯಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ರೈತರು ನಗದು ಪರಿಹಾರ ಪಡೆಯದೇ ಇದ್ದಲ್ಲಿ, ಅಭಿವೃದ್ಧಿಪಡಿಸಿದ ನಿವೇಶನದಲ್ಲಿ ಪ್ರತಿ ಎಕರೆಗೆ 10,781 ಚ.ಅಡಿ ಜಾಗವನ್ನು ಫಲಾನುಭವಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಅವರ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಈ ಮೊದಲು ಪ್ರತಿ ಎಕರೆಗೆ 9,500 ಚ.ಅಡಿ ಅಭಿವೃದ್ಧಿಪಡಿಸಿದ ಜಾಗವನ್ನು ಭೂ ಮಾಲೀಕರಿಗೆ ನೀಡಲಾಗುತ್ತಿತ್ತು. ಈಗ ಎಕೆರೆಗೆ 10,781 ಚ.ಅಡಿ ಜಾಗವನ್ನು ನೀಡಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ತೃತೀಯ ಲಿಂಗಿಗಳಿಗೆ ಸೌಲಭ್ಯ ಕಲ್ಪಿಸಲು ಸಮಿತಿ ರಚನೆ: ಹಾಲಪ್ಪ ಆಚಾರ್

ಜಮೀನು ಕಳೆದುಕೊಂಡ ಕುಟುಂಬದ ಸದಸ್ಯರಲ್ಲಿ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಭೂಮಿಯ ಬದಲಾಗಿ ಪರ್ಯಾಯ ಭೂಮಿ ನೀಡುವ ವ್ಯವಸ್ಥೆ ದೇಶದಲ್ಲಿ ಎಲ್ಲಿಯೂ ಜಾರಿಯಲ್ಲಿಲ್ಲ ಎಂದು ಉಪ ಪ್ರಶ್ನೆಯೊಂದಕ್ಕೆ ನಿರಾಣಿ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ

ರಾಜ್ಯದಲ್ಲಿ 83,058 ಎಕರೆಯನ್ನು ಕೈಗಾರಿಕಾ ಪ್ರದೇಶಕ್ಕಾಗಿ, 79,017 ಎಕರೆಯನ್ನು ಏಕಘಟಕ ಸಂಕೀರ್ಣದಡಿ ಒಟ್ಟು 1,62,000 ಎಕರೆಯನ್ನು ಕೆಐಎಡಿಬಿ ವಿವಿಧ ಜಿಲ್ಲೆಗಳಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *