ನಾಳೆ ಚಿಕ್ಕಬಳ್ಳಾಪುರಕ್ಕೆ ಅಮಿತ್ ಶಾ ಭೇಟಿ – ಪೊಲೀಸರಿಂದ ಬಿಗಿ ಬಂದೋಬಸ್ತ್

By
2 Min Read

ಚಿಕ್ಕಬಳ್ಳಾಪುರ: ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ನಾಳೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಶ್ರೀ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಗಳ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿಲಿದ್ದು, ಅಮಿತ್ ಶಾ ಆಗಮನಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಸತ್ಯಸಾಯಿ ಗ್ರಾಮದ ಸರಳ ಮೆಮೋರಿಯಲ್ ಆಸ್ಪತ್ರೆಯ ಪಕ್ಕದಲ್ಲಿಯೇ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಹಾಗೂ ಉಚಿತ ವೈದ್ಯಕೀಯ ಶಿಕ್ಷಣಕ್ಕೆ ನೆರವಾಗುವ ನೂತನ ಕಟ್ಟಡ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್

ತುಮಕೂರು ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ ಮುಗಿಸಿ ಶ್ರೀ ಸತ್ಯಸಾಯಿ ಗ್ರಾಮದ ಕ್ರೀಡಾಂಗಣಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ 2 ಗಂಟೆ 15 ನಿಮಿಷಕ್ಕೆ ಅಮಿತ್ ಶಾ ಅವರು ಆಗಮಿಸಲಿದ್ದು, ಸತ್ಯಸಾಯಿ ಸಂಸ್ಥೆಗಳ ಸದ್ಗುರು ಮಧುಸೂದನ್ ಸಾಯಿಯವರೊಡನೆ 400 ಹಾಸಿಗೆಗಳ ಆಸ್ಪತ್ರೆಗೆ ಭೂಮಿ ಪೂಜೆ ನೇರವೇರಿಸಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ 3.15 ನಿಮಿಷಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಅಮಿತ್ ಶಾ ರವರಿಗೆ ಜೆಡ್ ಪ್ಲಸ್ ಭದ್ರತೆ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಕಳೆದ 2-3 ದಿನಗಳಿಂದ ಕಾರ್ಯಕ್ರಮದ ವೇದಿಕೆ ಸೇರಿದಂತೆ ಸತ್ಯಸಾಯಿ ಗ್ರಾಮದಲ್ಲಿ ಪೊಲೀಸರ ಪಹರೆ ಮಾಡುತ್ತಿದ್ದು, ಭದ್ರತಾ ಕ್ರಮಗಳ ಬಗ್ಗೆ ಸಭೆಗಳನ್ನು ನಡೆಸಲಾಗಿದೆ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಸೇರಿದಂತೆ ಗುಪ್ತಚರ ಇಲಾಖೆಯ ಎಡಿಜಿಪಿ ಶರತ್ ಚಂದ್ರ ಹಾಗೂ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕೇಂದ್ರ ಗೃಹ ಇಲಾಖೆಯ ತಂಡಗಳು ಸಹ ಭದ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿ ಬಂದೋಬಸ್ತ್ ವ್ಯವಸ್ಥೆಗಳನ್ನು ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಅಮಿತ್ ಶಾಗೆ ಸಿಎಂ ಸೇರಿ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ.

ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಲಿರುವ ಅಮಿತ್ ಷಾ ಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿಂತೆ ಬಿಜೆಪಿ ಪಕ್ಷದ ರಾಜ್ಯಾಧ್ಯಾಕ್ಷ ನಳೀನ್ ಕುಮಾರ್ ಕಟೀಲ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂಟಿಬಿ ನಾಗರಾಜ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ರಾಜ್ಯ ಕಾಂಗ್ರೆಸ್‍ನ ಪವರ್ ಪಾಯಿಂಟ್‍ಗಳಲ್ಲ: ಎಂ.ಬಿ.ಪಾಟೀಲ್

Share This Article
Leave a Comment

Leave a Reply

Your email address will not be published. Required fields are marked *