ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ- ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ

Public TV
0 Min Read

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಲಾಟೆ ವೇಳೆ ಕಿಡಿಗೇಡಿಗಳು ಇಮ್ರಾನ್ ಶರೀಪ್‍ಗೆ ಪೆಟ್ರೋಲ್ ಹಾಕಿ ಬೆಂಕಿಹಚ್ಚಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿರುವ ಇಮ್ರಾನ್‍ನನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಹೆಚ್‌ಕೆಬಿಕೆ ಕಾಲೇಜು ಬಳಿ ಘಟನೆ ನಡೆದಿದೆ. ಘಟನೆ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *