ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ರಾಜ್ಯ ಸರ್ಕಾರದಿಂದ ಸಕಲ ಸಿದ್ಧತೆ: ನಾರಾಯಣ ಗೌಡ

Public TV
1 Min Read

ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಎರಡನೇ ಆವೃತ್ತಿ ಯಶಸ್ವಿ ಆಯೋಜನೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ತಿಳಿಸಿದರು.

ಖೇಲೋ ಇಂಡಿಯಾ ಯೂನಿವರ್ಸಿಟಿ 2021ರ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ. ನಾರಾಯಣಗೌಡ ಇಂದು ವಿಧಾನಸೌಧದಲ್ಲಿ ಕೇಂದ್ರ ಯುವಜನ ಹಾಗೂ ಕ್ರೀಡಾ ಇಲಾಖೆ ಕಾರ್ಯದರ್ಶಿ ಸುಜಾತಾ ಚತುರ್ವೇದಿ ಸೇರಿದಂತೆ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು. ಇದನ್ನೂ ಓದಿ: ಕೇಸರಿ ಕನ್ನಡಕದೊಳಗಿಂದ ಬೊಮ್ಮಾಯಿಗೆ ಜನರ ಕಷ್ಟ ಕಾಣದಿರಬಹುದು, ನಮಗೆ ಕಾಣುತ್ತಿದೆ: ಕಾಂಗ್ರೆಸ್

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾರಾಯಣಗೌಡ, ಏಪ್ರಿಲ್ 24 ರಿಂದ ಮೇ 3 ರವರೆಗೂ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಕ್ರೀಡಾಕೂಟ ನಡೆಯಲಿದ್ದು, ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಕೇಂದ್ರ ಸರ್ಕಾರದ ಕ್ರೀಡಾ ಸಚಿವ ಅನುರಾಗ್ ಠಾಕೂರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸುಮಾರು 4,500 ಸಾವಿರ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಮಾತನಾಡಲ್ಲ, ನನ್ನ ಆಕ್ಷನ್ ಮಾತನಾಡುತ್ತದೆ: ವಿಪಕ್ಷಗಳಿಗೆ ಬೊಮ್ಮಾಯಿ ತಿರುಗೇಟು

ಈ ವೇಳೆ ಕೇಂದ್ರ ಕ್ರೀಡಾ ಇಲಾಖೆ ಕಾರ್ಯದರ್ಶಿ ಸುಜಾತಾ ಚತುರ್ತೇದಿ ಮಾತನಾಡಿ, ಶಾಲೆ ಮತ್ತು ಕಾಲೇಜಿನಲ್ಲಿ ಕ್ರೀಡಾ ಸ್ಪೂರ್ತಿ ಮೂಡಿಸಲು ಖೇಲೋ ಇಂಡಿಯಾ ನಡೆಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ 35 ಕೋಟಿ ರೂ. ಅನುದಾನ ನೀಡಿದೆ. ದೇಶದ 190 ಯೂನಿವರ್ಸಿಟಿಗಳ ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಮಲ್ಲಗಂಬವನ್ನು ಸೇರಿಸಲಾಗಿದ್ದು, ಯೋಗ, ಕರಾಟೆ ಸೇರಿದಂತೆ 20 ಕ್ರೀಡೆಗಳ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *