ಜು.1ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ – ಪಂಜಾಬ್ ಸರ್ಕಾರ ಘೋಷಣೆ

Public TV
2 Min Read

ಚಂಡೀಗಢ: ಜುಲೈ 1 ರಿಂದ ಪ್ರತಿಯೊಂದು ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪಂಜಾಬ್‍ನ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಘೋಷಿಸಿದೆ.

ಈ ಕುರಿತಂತೆ ಮಂಗಳವಾರ ಟ್ವೀಟ್ ಮಾಡಿದ್ದ ಭಗವಂತ್ ಮಾನ್ ಅವರು, ನಮ್ಮ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ಪಂಜಾಬ್ ಜನತೆಗೆ ಒಳ್ಳೆಯ ಸುದ್ದಿ ನೀಡುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ – ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿತ

ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಎಎಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಪ್ರತಿ ಮನೆಗೆ 300 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದು ಒಂದಾಗಿತ್ತು. ಸದ್ಯ 300 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಸರಬರಾಜು ಘೋಷಿಸುವ ವೇಳೆ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ, ದೀರ್ಘ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗುತ್ತದೆ ಮತ್ತು ಅನೇಕ ಜನರು ದುಬಾರಿ ಬಿಲ್‍ಗಳನ್ನು ಪಡೆಯುತ್ತಾರೆ ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ತಪ್ಪಾದ ಬಿಲ್‍ಗಳನ್ನು ಪಡೆದ ಅನೇಕ ಜನರಿದ್ದಾರೆ ಮತ್ತು ವಿದ್ಯುತ್ ಬಿಲ್ ಪಾವತಿಸದೇ ಇರುವವರ ವಿದ್ಯುತ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಅಂತಹ ಜನರು ವಿದ್ಯುತ್ ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ

ಎಎಪಿ ಸರ್ಕಾರವು ದೆಹಲಿಯಲ್ಲಿ ಪ್ರತಿ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತದೆ. ಕಳೆದ ತಿಂಗಳು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಘೋಷಿಸಿದ್ದರು. ಇದೀಗ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *