Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್‌ ಹೇಗಿದೆ ಗೊತ್ತಾ?

By
1 Min Read

ನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ ಕನ್ನಡದ ಜೊತೆಗೆ ತೆಲುಗು ಭಾಷೆಯಲ್ಲಿಯೂ ಬ್ಯುಸಿಯಾಗಿದ್ದಾರೆ. ತಮ್ಮ ಅಮೋಘ ನಟನೆಯಿಂದ ಚಿತ್ರರಸಿಕರನ್ನು ರಂಜಿಸ್ತಿರುವ ವಸಿಷ್ಠ ನಾಯಕ ನಟನಾಗಿಯೂ, ಖಳನಾಯಕನಾಗಿಯೂ ಬೆಳ್ಳಿಪರದೆಯಲ್ಲಿ ಮೋಡಿ ಮಾಡ್ತಿದ್ದಾರೆ. ಕೈತಂಬಾ ಚಿತ್ರಗಳಿರಬೇಕಾದ್ರೆ, ಈಗ ವಸಿಷ್ಠ ಸಿಂಹ ಮತ್ತೊಂದು ಸಿನಿಮಾದಲ್ಲಿ ನಾಯಕನಾಗಿ ಮಿಂಚಲು ಸಜ್ಜಾಗಿದ್ದಾರೆ.

`ಕೆಜಿಎಫ್ 2′ ಖ್ಯಾತಿಯ ವಸಿಷ್ಠ ಹೀರೋ ಆಗಿ ನಟಿಸ್ತಿರುವ ಮತ್ತೊಂದು ಹೊಸ ಚಿತ್ರ ಅನೌನ್ಸ್ ಆಗಿದೆ. ಈ ಸಿನಿಮಾಗೆ Love…ಲಿ ಎಂಬ ವಿಭಿನ್ನ ಟೈಟಲ್ ಇಡಲಾಗಿದ್ದು, ಸಿನಿಪ್ರಿಯರನ್ನ ಅಟ್ರಾಕ್ಟ್ ಮಾಡ್ತಿದೆ. ಬೆಂಗಳೂರಿನ ಸರ್ಕಲ್ ಮಾರಮ್ಮ ದೇಗುಲದಲ್ಲಿ ಇಂದು ಸರಳವಾಗಿ ಸಿನಿಮಾದ ಮುಹೂರ್ತ ನೆರವೇರಿದೆ. ಮುಹೂರ್ತ ಮುಗಿಸಿರುವ ಚಿತ್ರತಂಡ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ. ಬೈಕ್ ಮೇಲೆ ಕುಳಿತು.. ಧಮ್ ಹೊಡೆಯುತ್ತಾ, ಸಖತ್ ಸ್ಟೈಲೀಶ್ ಲುಕ್ ನಲ್ಲಿ ಚಿಟ್ಟೆ ಮಿಂಚಿದ್ದಾರೆ.

 

View this post on Instagram

 

A post shared by Vasishta N Simha (@imsimhaa)

Love…ಲಿ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು,ರೋಮ್ಯಾನ್ಸ್-ಲವ್ ಸ್ಟೋರಿ ಜೊತೆಗೆ ರೌಡಿಸಂ ವಿಭಿನ್ನ ಕಥಾಹಂದರವನ್ನು ಸಿನಿಮಾ ಒಳಗೊಂಡಿದೆ. ಭಿನ್ನ ಪಾತ್ರದ ಮೂಲಕ ಕಮಾಲ್ ವಸಿಷ್ಠ ರೆಡಿಯಾಗಿದ್ದಾರೆ. ಇದನ್ನೂ ಓದಿ:`ಅದ್ದೂರಿ ಲವರ್’ಗಾಗಿ `ಕಿಸ್’ ಹೀರೋ ವಿರಾಟ್ ಭರ್ಜರಿ ವರ್ಕೌಟ್

ಮಫ್ತಿ ನಿರ್ದೇಶಕ ನರ್ತನ್ ಜೊತೆ ಕೆಲಸ ಮಾಡಿ ಅನುಭವವಿರುವ ಚೇತನ್ ಕೇಶವ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಮೇ 4 ರಿಂದ ಬೆಂಗಳೂರು ಸುತ್ತಮುತ್ತ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸದ್ಯ Love…ಲಿ ಚಿತ್ರದ ಫಸ್ಟ್ ಲುಕ್‌ನಿಂದ ಗಮನ ಸೆಳೆಯುತ್ತಿರೋ ವಸಿಷ್ಠ ಕೈಯಲ್ಲಿ `ಹೆಡ್‌ಬುಷ್’, `ಸಿಂಬಾ’, `ತಲ್ವಾರ್‌ಪೇಟೇ’, `ಕಾಲಚಕ್ರ’ ಚಿತ್ರಗಳು ಅಕೌಂಟ್‌ನಲ್ಲಿದೆ.

Share This Article
Leave a Comment

Leave a Reply

Your email address will not be published. Required fields are marked *