ಖೇಲೋ ಇಂಡಿಯಾ 2ನೇ ಆವೃತ್ತಿಗೆ ರಾಜಧಾನಿ ಸಜ್ಜು – ಕ್ರೀಡಾಪಟುಗಳಿಗೆ ಏನೆಲ್ಲಾ ಸೌಲಭ್ಯವಿದೆ?

Public TV
2 Min Read

ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2ನೇ ಆವೃತ್ತಿ ಮುನ್ನಡೆಸಲು ಬೆಂಗಳೂರು ಸಜ್ಜಾಗಿದೆ. 2ನೇ ಅವೃತ್ತಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ನೆರವೇರಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿಯವರೆಗೆ ಸುಮಾರು 890 ಕ್ರೀಡಾಪಟುಗಳು ಆಗಮಿಸಿದ್ದು, ಉಳಿದವರು ಶೀಘ್ರವೇ ಬರುವ ನಿರೀಕ್ಷೆಯಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜಸ್ಥಾನ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಆಘಾತ – ತಂಡದೊಂದಿಗಿಲ್ಲ ಕೋಚ್ ಪಾಟಿಂಗ್

KHELO INDIA 2

ಪ್ರತಿ ಕ್ರೀಡಾಪಟುವಿಗೂ ಕೆಎಮ್‌ಎಫ್ ತಿನಿಸುಗಳ ಕಿಟ್ ನೀಡಿ ಸ್ವಾಗತಿಸಲಾಗುತ್ತಿದೆ. ಮೇ 3ರ ವರೆಗೆ ನಡೆಯಲಿರುವ ಕ್ರೀಡಾಕೂಟಕ್ಕೆ ಬರುವ ಕ್ರೀಡಾಪಟುಗಳಿಗಾಗಿ ಈಗಾಗಲೇ ಜೈನ್ ಗ್ಲೋಬಲ್ ವಿಶ್ವವಿದ್ಯಾನಿಲಯದಲ್ಲಿ 2800, ಶ್ರೀ ಶ್ರೀರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್‌ನಲ್ಲಿ 1500 ಹಾಗೂ ವಿವಿಧ ಹೋಟೆಲ್‌ಗಳಲ್ಲಿ 1556 ಪ್ರತಿನಿಧಿಗಳಿಗೆ ವಸತಿ ಸೌಲಭ್ಯ ಸಜ್ಜುಗೊಳಿಸಲಾಗಿದೆ. ಕ್ರೀಡಾಕೂಟಕ್ಕಾಗಿ ಬಿಎಂಟಿಸಿ 160 ಬಸ್ಸುಗಳನ್ನು ಒದಗಿಸಿದೆ. 2800 ಕಾರುಗಳನ್ನು ಕ್ರೀಡಾಕೂಟದಲ್ಲಿನ ವಿವಿಧ ಹಂತಗಳ ಪ್ರತಿನಿಧಿಗಳ ಪ್ರಯಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: IPL ಶತಕ ಸಿಡಿಸಿ ಮೆರೆದವರು ಯಾರು – ಇಲ್ಲಿದೆ ಟಾಪ್ 10 ಸಿಕ್ಸರ್ ವೀರರ ಪಟ್ಟಿ

khelobig

ಈ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಯೋಗಾಸನ ಮತ್ತು ಮಲ್ಲಕಂಬದಂತಹ ದೇಶೀ ಕ್ರೀಡೆಗಳೊಂದಿಗೆ 20 ಕ್ರೀಡಾ ವಿಭಾಗಗಳಿವೆ. ವೇಯ್ಟ್ ಲಿಫ್ಟಿಂಗ್, ಜೂಡೋ, ಕುಸ್ತಿ, ಕಬ್ಬಡಿ, ವಾಲಿಬಾಲ್, ಈಜು, ಯೋಗಾಸನ, ಆರ್ಚರಿ, ಫೆನ್ಸಿಂಗ್, ಕರಾಟೆ, ಬಾಕ್ಸಿಂಗ್ ಹಾಗೂ ಫುಟ್‌ಬಾಲ್ ಸೇರಿದಂತೆ 13 ವಿಭಾಗಗಳ ಕ್ರೀಡೆಗಳು ಜೈನ್ ಯೂನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ ಪ್ರದರ್ಶನಗೊಳ್ಳಲಿವೆ. ಉಳಿದ ಕ್ರೀಡೆಗಳು ಶ್ರೀ ಕಂಠೀರವ ಸ್ಟೇಡಿಯಂ, ದಿ ಜೈನ್ ಸ್ಪೋರ್ಟ್ಸ್ ಸ್ಕೂಲ್, ಸಾಯಿ ನೇತಾಜಿ ಸುಭಾಷ್ ಸದರ್ನ್ ಸೆಂಟರ್ ಮತ್ತು ಕೆ.ಎಂ.ಕಾರಿಯಪ್ಪ ಹಾಕಿ ಸ್ಟೇಡಿಯಂ ಈ ಸ್ಥಳಗಳಲ್ಲಿ ನಡೆಯಲಿವೆ ಎಂದು ವಿವರಿಸಿದರು. ಇದನ್ನೂ ಓದಿ: ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

DWD Khelo India

ಪತ್ರಕರ್ತರಿಗೆ ಸೌಲಭ್ಯ: ಎಲ್ಲಾ ಕ್ರೀಡಾಂಗಣಗಳಲ್ಲಿ ಮಾಧ್ಯಮ ಪ್ರತಿನಿಧಿಗಳು ಹಾಗೂ ಪತ್ರಕರ್ತರಿಗೆ ಅನುಕೂಲವಾಗಲು ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿಯೊಂದು ಕ್ರೀಡಾಂಗಣದಲ್ಲಿಯೂ ಉಚಿತ ವೈಫೈ ಸೌಲಭ್ಯವಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರದ ಕ್ರೀಡಾ ಸಚಿವಾಲಯದ ರಾಜ್ಯ ನಿಶಿತ್ ಪ್ರಮಾಣಿಕ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಎಸ್.ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು. ಆಹ್ವಾನಿತರನ್ನು ಹೊರತುಪಡಿಸಿ, ಉಳಿದೆಲ್ಲರಿಗೂ ಕ್ರೀಡಾಂಗಣದ ಹಿರಗೆ ಬೃಹತ್ ಪರದೆಯ ಮೇಲೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ಆಕಾಶವಾಣಿ, ರೇಡಿಯೋ ಸಿಟಿ, ಡಿಡಿ ಸ್ಪೋರ್ಟ್ಸ್‌ ನಲ್ಲಿ ನೇರಪ್ರಸಾರವಾಗಲಿದೆ ಎಂದು ನಾರಾಯಣಗೌಡ ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *