ಮಹಿಳೆಯರು, ಮಕ್ಕಳು ಭವಿಷ್ಯದ ಆತಂಕದಲ್ಲಿ ಬದುಕುತ್ತಿದ್ದಾರೆ: ವತ್ಸಲಾ ವರತ್ತನ

Public TV
1 Min Read

ಕೊಲಂಬೋ: ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿನ ಈಗಾಗಲೇ ಆರ್ಥಿಕ ಅರಾಜಕತೆ ಉಂಟಾಗಿದೆ. ವಿದ್ಯುತ್ ಪೂರೈಕೆ ಇಲ್ಲ, ತೈಲ ಲಭಿಸುತ್ತಿಲ್ಲ. ಕೈಗೆಟುವ ಬೆಲೆಯಲ್ಲಿ ಆಹಾರ ಪದಾರ್ಥಗಳು ಸಿಗುತ್ತಿಲ್ಲ. ಪರಿಸ್ಥಿತಿ ಎದುರಿಸಲು ಸಾಧ್ಯವಾಗದೇ ಅನೇಕ ಜನರು ವಲಸೆ ಹೋಗಿದ್ದಾರೆ ಎನ್ನುವ ಮಾಹಿತಿ ಈಗಾಗಲೇ ತಿಳಿದು ಬಂದಿದೆ. ಈ ನಡುವೆ ಪ್ರಸ್ತುತ ಶ್ರೀಲಂಕಾ ಸ್ಥಿತಿಗತಿಯ ಕುರಿತು ಶ್ರೀಲಂಕಾ ರಕ್ಷಣಾ ಸಚಿವಾಲಯದ ಅಭಿವೃದ್ಧಿ ಅಧಿಕಾರಿ ವತ್ಸಲಾ ವರತ್ತನ ಅವರು ಅಲ್ಲಿನ ಕರಾಳತೆಯನ್ನು ಬಿಚ್ಚಿಟ್ಟಿದ್ದಾರೆ.

ಪಬ್ಲಿಕ್ ಟಿವಿ ಡಿಜಿಟಲ್‌ಗೆ ಪ್ರತಿಕ್ರಿಯಿಸಿದ ಅವರು, ಶ್ರೀಲಂಕಾ ಪ್ರಸ್ತುತ ದೊಡ್ಡ ಮಟ್ಟದ ಆರ್ಥಿಕ ಹಿಂಜರಿತ ಎದುರಿಸುತ್ತಿದೆ. ದಿನದಿಂದ ದಿನಕ್ಕೆ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂಧನ ಕೊರತೆಯಿಂದಾಗಿ ಸಾರ್ವಜನಿಕ ಸಾರಿಗೆ ದರಗಳು ಹೆಚ್ಚಾಗಿವೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ನೋಡಿ ಬೇಸರವಾಗಿದೆ: ಸೂಪರ್‌ ಮಾಡೆಲ್‌ ಪದ್ಮಾ ಲಕ್ಷ್ಮೀ

srilanka

ಮಹಿಳೆಯರು, ಮಕ್ಕಳು ಸೇರಿದಂತೆ ಇಡೀ ಶ್ರೀಲಂಕಾ ಜನತೆ ಭವಿಷ್ಯದ ಆತಂಕದಲ್ಲಿ ಬದುಕುತ್ತಿದ್ದಾರೆ. ಸಿಗುವ ಕೂಲಿಯಿಂದ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಬಡವರು ಆಹಾರ ಕೊಳ್ಳಲು ಕಷ್ಟಪಡುತ್ತಿದ್ದರೆ, ಇತರರು ಹೆಚ್ಚಿನ ಹಣ ವ್ಯಯಿಸಿ ಆಹಾರ ಕೊಂಡುಕೊಳ್ಳುತ್ತಿದ್ದಾರೆ. ಅನೇಕ ಜನರು ದೇಶವನ್ನೇ ತೊರೆಯುತ್ತಿದ್ದಾರೆ. ನಮ್ಮ ಸುಂದರ ದೇಶಕ್ಕೆ ಏನಾಯಿತು ಎಂಬ ಪ್ರಶ್ನೆಗೆ ಉತ್ತರವೂ ನಮಗೆ ತಿಳಿದಿಲ್ಲ. ಇದು ತುಂಬಾ ದುಃಖವಾಗಿದೆ. ಸದ್ಯಕ್ಕೆ ಜನರಿಗೆ ತೊಂದರೆಯಾಗದ ರೀತಿಯಲ್ಲಿ ಆಂದೋಲನ ನಡೆಯುತ್ತಿದೆ. ಮುಂದೆ ಏನಾಗುತ್ತದೆ ಎನ್ನುವುದು ಗೊತ್ತಿಲ್ಲ.. ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಕಲಿ ಶಸ್ತ್ರಾಸ್ತ್ರ ಪರವಾನಗಿ ದಂಧೆ – ನಾಲ್ವರು ಅರೆಸ್ಟ್

Share This Article
Leave a Comment

Leave a Reply

Your email address will not be published. Required fields are marked *