ದ್ವೇಷಕ್ಕೆ ಪ್ರಧಾನ ಮಂತ್ರಿ ಅಂತ್ಯ ಹಾಡಬೇಕು: ಓವೈಸಿ

Public TV
2 Min Read

ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶುಕ್ರವಾರ ಹೈದರಾಬಾದ್‍ನಲ್ಲಿ ಭಾವನಾತ್ಮಕ ಭಾಷಣದಲ್ಲಿ, ಬಿಜೆಪಿ ಮುಸ್ಲಿಮರ ವಿರುದ್ಧ ಯುದ್ಧ ನಡೆಸುತ್ತಿದೆ ಮತ್ತು ಸಮುದಾಯದ ವಿರುದ್ಧ ದ್ವೇಷವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಜಮಾತ್-ಉಲ್-ವಿದಾ (ರಂಜಾನ್ ಕೊನೆಯ ಶುಕ್ರವಾರ) ಸಂದರ್ಭದಲ್ಲಿ ಮೆಕ್ಕಾ ಮಸೀದಿಯಲ್ಲಿ ‘ಜಲ್ಸೆ ಯಾಮ್-ಉಲ್-ಕುರಾನ್’ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದ್ವೇಷದ ಘಟನೆಗಳಿಂದ ದೇಶವನ್ನು ದುರ್ಬಲಗೊಳಿಸುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ

MODi

ಬಿಜೆಪಿ ಮುಸ್ಲಿಮರ ಮೇಲೆ ತುಂಬಾ ಒತ್ತಡ ಹೇರಲು ಬಯಸುತ್ತದೆ. ಅಂತಿಮವಾಗಿ ಮುಸ್ಲಿಮರ ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿಸಲು, ಅವರನ್ನು ನೋಯಿಸಲು ಬಯಸುತ್ತದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ನಮ್ಮ ದೇಶದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಬಿರುಗಾಳಿಯನ್ನು ಸೃಷ್ಟಿಸಿದೆ. ಮುಸ್ಲಿಮರು ತಾಳ್ಮೆ ಮತ್ತು ಧೈರ್ಯವನ್ನು ಕಳೆದುಕೊಳ್ಳುವುದಿಲ್ಲ. ಸಂವಿಧಾನದೊಳಗೆ ಉಳಿಯುವ ಮೂಲಕ ಈ ದಬ್ಬಾಳಿಕೆಯ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ: ಅಸಾದುದ್ದೀನ್‌ ಓವೈಸಿ

ಈ ದ್ವೇಷವನ್ನು ನಿಲ್ಲಿಸುವಂತೆ ನಾವು ಪ್ರಧಾನಿಯನ್ನು ಕೇಳಲು ಬಯಸುತ್ತೇವೆ. ಇದು ದೇಶವನ್ನು ದುರ್ಬಲಗೊಳಿಸುತ್ತಿದೆ. ನಿಮ್ಮ ಪಕ್ಷ ಮತ್ತು ಸರ್ಕಾರವು ಭಾರತೀಯ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಲ್ಡೋಜರ್ ವಿವಾದದ ಬಗ್ಗೆ ಮಾತನಾಡಿ, ಮಧ್ಯಪ್ರದೇಶದ ಖಾರ್ಗೋನ್ ನಗರ ಮತ್ತು ಸೆಂಧ್ವಾದಲ್ಲಿ ಮುಸ್ಲಿಮರ ಮನೆಗಳನ್ನು ನೆಲಸಮ ಮಾಡಲಾಗಿದೆ. ಮುಸ್ಲಿಮರನ್ನು ಬಹಿಷ್ಕರಿಸಲು ಕರೆ ನೀಡಲಾಗಿದೆ. ಅವರ ಅಂಗಡಿಗಳಿಂದ ಖರೀದಿಸಬೇಡಿ ಅಂತಾ ಮುಸ್ಲಿಂ ವರ್ತಕರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ಇತ್ತೀಚೆಗೆ ಹರಿಯಾಣದಲ್ಲಿ, ಮುಸ್ಲಿಂ ವೃದ್ಧರೊಬ್ಬರ ಗಡ್ಡವನ್ನು ಹಿಡಿದು ಥಳಿಸಲಾಗಿದೆ. ಅದೇ ರೀತಿ ಹಸುವನ್ನು ಕೊಂದಿದ್ದಾನೆ ಎಂದು ಆರೋಪಿಸಿ ಮತ್ತೊಬ್ಬನನ್ನು ಮನೆಯಿಂದ ಕರೆದೊಯ್ದು ಥಳಿಸಿದ್ದಾರೆ ಎಂದು ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ದೇಶದಲ್ಲಿ ಅನೇಕ ಘಟನೆಗಳು ನಡೆಯುತ್ತಿವೆ ಎಂದು ನಮಗೆ ತಿಳಿದಿದೆ. ಈ ಸಂಬಂಧ ನನಗೆ ಅನೇಕ ಕರೆಗಳು ಬರುತ್ತಿವೆ. ಜನರು ನನಗೆ ಹೇಳುತ್ತಾರೆ, ಅಸಾದುದ್ದೀನ್ ಅವರೇ ನಮ್ಮ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗುತ್ತಿದೆ. ನಾವು ನಾಶವಾಗುತ್ತಿದ್ದೇವೆ ಅಂತ ಹೇಳಿ ಅಳಲು ತೊಡಿಕೊಳ್ಳುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯಿಸಿ, ಭಯಪಡುವ ಅಗತ್ಯವಿಲ್ಲ, ಧೈರ್ಯದಿಂದಿರಿ. ಮುಸ್ಲಿಮರು ಭರವಸೆ ಮತ್ತು ಧೈರ್ಯವನ್ನು ಕಳೆದುಕೊಳ್ಳಬೇಡಿ ಎಂದು ತಿಳಿಸಿದ್ದೇನೆ ಎಂದು ಮಾತನಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *