ಜಮ್ಮು-ಕಾಶ್ಮೀರ ಗಡಿಯಲ್ಲಿ 200 ಭಯೋತ್ಪಾದಕರು ದಾಳಿಗೆ ಹೊಂಚುಹಾಕುತ್ತಿದ್ದಾರೆ: ಭಾರತ ಸೇನೆ ಎಚ್ಚರಿಕೆ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯುದ್ಧಕ್ಕೂ ಒಳನುಸುಳಲು ಸುಮಾರು 200 ಭಯೋತ್ಪಾದಕರು ಕಾಯುತ್ತಿದ್ದಾರೆ ಎಂದು ಉತ್ತರ ಸೇನಾ ಕಮಾಂಡರ್‌ ಜನರಲ್‌ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ್ದಾರೆ.

ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವಿಕೆ ತೀವ್ರವಾಗಿ ಕಡಿಮೆಯಾಗಿದೆ. 2021ರ ಒಪ್ಪಂದದ ನಂತರ ಇಂಡೋ-ಪಾಕ್ ಗಡಿಯಲ್ಲಿ ಕದನ ವಿರಾಮವು ಉತ್ತಮವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ

ಈ ವರ್ಷ ಇಲ್ಲಿಯವರೆಗೆ 21 ವಿದೇಶಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತರಬೇತಿ ಪಡೆದ ಭಯೋತ್ಪಾದಕರ ಸಂಖ್ಯೆ ಪ್ರತಿ ವರ್ಷವೂ ಕ್ಷೀಣಿಸುತ್ತಿದೆ. ಇಂಡೋ-ಪಾಕ್ ಗಡಿಯಲ್ಲಿ ಸುಮಾರು 200 ಭಯೋತ್ಪಾದಕರ ಸಂಖ್ಯೆ ಇದೆ. ಅವರು ದಾಳಿ ನಡೆಸಲು ಕಾಯುತ್ತಿದ್ದಾರೆ ಎಂದು ದ್ವಿವೇದಿ ಅವರು ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಿಯೋಜಿಸಿರುವ ಭದ್ರತಾ ಪರಿಸ್ಥಿತಿಯ ಪ್ರಶ್ನೆಗೆ ಉತ್ತರಿಸಿದ್ದಾರೆ.

ಯಾವುದೇ ಒಳನುಸುಳುವಿಕೆ ನಡೆಯದಂತೆ ಎಲ್ಲಾ ಮೀಸಲು ಪಡೆಗಳನ್ನು ಎರಡನೇ ಹಂತದ ರಕ್ಷಣೆಯಲ್ಲಿ ಇರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿದ್ದೇವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಕದನ ವಿರಾಮ ಉಲ್ಲಂಘನೆಗಳ ಸಂಖ್ಯೆಯು ತುಂಬಾ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಾಶ್ ರೂಂನಲ್ಲಿ ಬ್ರಿಟನ್ ಮಹಿಳೆಗೆ ಕಿರುಕುಳ – ಕಾಮುಕ ಅರೆಸ್ಟ್

ಅಮರನಾಥ ಯಾತ್ರೆ ಕುರಿತು ಮಾತನಾಡಿದ ಅವರು, 2019ಕ್ಕೆ ಹೋಲಿಸಿದರೆ ಈ ವರ್ಷ ಯಾತ್ರಾರ್ಥಿಗಳ ಸಂಖ್ಯೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ. ಯಾತ್ರೆಯ ಸಮಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯಗಳು ನಡೆಯದಂತೆ ಕ್ರಮವಹಿಸಲಾಗುವುದು. ಇದಕ್ಕಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *