ಬಾಲಿವುಡ್ ದಿಗ್ಗಜ ನಟರ ವಿರುದ್ಧ ದೂರು ದಾಖಲು

Public TV
1 Min Read

ಮಾಜಕ್ಕೆ ಹಾನಿ ಮಾಡುವಂತಹ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟ, ನಟಿಯರು ಹಾಗೂ ಸಿಲೆಬ್ರಿಟಿಗಳ ಬಗ್ಗೆ ಅಲ್ಲಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಕನ್ನಡ ಸಿನಿಮಾ ರಂಗದಲ್ಲಿ ಹಣಕ್ಕಾಗಿ ಆನ್‌ಲೈನ್ ಆಟಗಳಿಗೆ ರೂಪದರ್ಶಿಯಾಗಿ ಕೆಲಸ ಮಾಡುತ್ತಿದ್ದ ಕಲಾವಿದರ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈಗಲೂ ಅದು ಮುಂದುವರಿದಿದೆ. ಇದನ್ನೂ ಓದಿ : ಓಟಿಟಿಯಲ್ಲೂ ದಾಖಲೆ ಬರೆದ ‘ದಿ ಕಾಶ್ಮೀರ್ ಫೈಲ್ಸ್’

ಹಾಗೆಯೇ ಈ ವಿರೋಧದ ಅಲೆಯು ಬಾಲಿವುಡ್‌ನಲ್ಲೂ ಮುಂದುವರಿದಿದೆ. ಆನ್‌ಲೈನ್ ಜೂಜು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರ ಮೇಲೆ ಮುಂಬೈನಲ್ಲಿ ದೂರು ಕೊಟ್ಟಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಈ ನಟರ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ : ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್

ಮುಂಬೈ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಹೋರಾಟಗಾರ ತಮನ್ನಾ ಹಶ್ಮಿ ಎನ್ನುವವರು ದೂರು ನೀಡಿದ್ದು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ನಟರು ಭಾಗಿಯಾಗಿ ಯುವ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಅಮಿತಾಭ್ ಬಚ್ಚನ್, ಅಜಯ್ ದೇವಗನ್, ಶಾರುಖ್ ಖಾನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸೇರಿದಂತೆ ಹಲವು ಕಲಾವಿದರ ಹೆಸರನ್ನು ದೂರಿನಲ್ಲಿ ಹೆಸರಿಸಿ, ಕ್ರಮ ತಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಹಶ್ಮಿ. ಇದನ್ನೂ ಓದಿ : ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್

ಈ ಹಿಂದೆಯೂ ಬಾಲಿವುಡ್‌ನಲ್ಲಿ ಇಂಥದ್ದೊಂದು ಅಭಿಯಾನ ಶುರುವಾಗಿತ್ತು. ಐಎಎಸ್ ಅಧಿಕಾರಿಯೊಬ್ಬರು ನಡೆಸಿದ ಅಭಿಯಾನದಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು. ಇದೀಗ ಹಶ್ಮಿ ಅವರ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ ದೂರು ಕೊಟ್ಟ ಕೆಲವೇ ಗಂಟೆಗಳಲ್ಲೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 467, 468, 439 ಮತ್ತು 120 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಕೊಂಡಿದೆ. ವಿಚಾರಣೆಯನ್ನು ಮೇ 27ಕ್ಕೆ ನಗದಿ ಪಡಿಸಿದೆ ಎಂದು ಹಶ್ಮಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *