ಕಲ್ಲು ತೂರಿದವರಿಗೆ ಬುಲ್ಡೋಜರ್‌ ಶಾಕ್‌ ಕೊಟ್ಟ ಯೋಗಿ – ಅಕ್ರಮ ಕಟ್ಟಡಗಳು ಧ್ವಂಸ

By
1 Min Read

ಲಕ್ನೋ: ಉತ್ತರ ಪ್ರದೇಶದಲ್ಲಿ ಸರ್ಕಾರ ಮತ್ತೆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡಿದೆ. ಪ್ರವಾದಿ ಮಹಮ್ಮದ್ ಪೈಗಂಬರ್ ಬಗೆಗೆ ನೀಡಿದ ಹೇಳಿಕೆ ವಿರೋಧಿಸಿ, ಶುಕ್ರವಾರ ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದಾರೆ ಹಾಗೂ ಬುಲ್ಡೋಜರ್‌ಗಳಿಗೆ ಕೀಲಿ ಕೊಟ್ಟಿದ್ದಾರೆ.

8 ರಾಜ್ಯಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಜಿಲ್ಲೆಗಳಲ್ಲಿ ಪ್ರತಿಭಟನೆಯ ಕಿಚ್ಚು ಕಂಡು ಬಂದಿದೆ. ಕಾನ್ಪುರ್, ಪ್ರಯಾಗ್ ರಾಜ್, ಲಕ್ನೋ, ಮುರದಾಬಾದ್, ಸಹರಾನ್ಪುರ್, ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ಜೋರಾಗಿ ನಡೆದಿದೆ. ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚುವ ಪ್ರಯತ್ನದಿಂದಾಗಿ 40ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ. ಘಟನೆಗೆ ಸಂಬಂಧಿಸಿದಂತೆ 109 ಮಂದಿಯನ್ನು ಸದ್ಯ ಬಂಧಿಸಲಾಗಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

ಇದೀಗ ಕಲ್ಲು ತೂರಾಟ ನಡೆದ ಅಟಲ್ ಚೌಕ್ ಸುತ್ತಮುತ್ತಲಿನ ಪ್ರದೇಶಗಳಿಗೆ ಬುಲ್ಡೋಜರ್‌ಗಳು ಬಂದಿವೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಿದ ಬಳಿಕ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಜೂನ್ 3 ರಂದು ಕಾನ್ಪುರದಲ್ಲಿ ನಡೆದ ಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿಂತೆ ಸರ್ಕಾರ ಕ್ರಮವನ್ನು ಶನಿವಾರ ತೆಗೆದುಕೊಂಡಿದೆ. ಹಿಂಸಾಚಾರದ ಮಾಸ್ಟರ್ ಮೈಂಡ್ ಜಾಫರ್ ಹಯಾತ್ ಹಶ್ಮಿ ಅವರ ಆಪ್ತ ಸಹಾಯಕನ ಮನೆಯ ಮೇಲೆ ಬುಲ್ಡೋಜರ್ ನುಗ್ಗಿದೆ. ಅಕ್ರಮ ಕಟ್ಟಡಡಗಳನ್ನು ನೆಲಸಮಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಇದನ್ನೂ ಓದಿ: ಎಸ್‍ಡಿಪಿಐ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸರು

ಪ್ರತಿಭಟನೆ ನಿಯಂತ್ರಣಕ್ಕೆ ಬರುತ್ತಿದ್ದಂತೆ ಇಂತಹ ಘಟನೆಗಳು ಮರುಕಳಿಸುವ ಅನುಮಾನದ ಹಿನ್ನಲೆ ಯೋಗಿ ಆದಿತ್ಯನಾಥ್ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅಲ್ಲದೇ ಶಾಂತಿ ಕದಡಲು ಪ್ರಯತ್ನ ಮಾಡಿದ ಎಲ್ಲಾ ಆರೋಪಿಗಳನ್ನು ಮುಲಾಜಿಲ್ಲದೇ ಬಂಧಿಸಿ ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿರುವ ಹಿನ್ನಲೆ ಯೋಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *