ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

Public TV
2 Min Read

ಬೆಂಗಳೂರು: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು ಎಂದು ಮಾಜಿ ಪ್ರಧಾನಿ ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ 2022ರ ಜೂನ್‌ 18 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಾನು ಭಾಗವಹಿಸಿದ್ದಾಗ, ನನ್ನ ಮೂಲಕ ತಮಗೆ ಮನವರಿಕೆ ಮಾಡಲು ನೀಡಿದ ಮನವಿ ಪತ್ರವನ್ನು ಇದಕ್ಕೆ ಲಗತ್ತಿಸಿರುತ್ತೇನೆ. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ 

ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ಕುವೆಂಪು ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದು, ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ.

TEXTBOOK

ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು. ಇನ್ನು ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ.

ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ. ಇದನ್ನೂ ಓದಿ: ಚಿಟ್ ಫಂಡ್ ಮಾಡಿ ಜನರಿಗೆ ಚೀಟಿಂಗ್ ಮಾಡಿದ್ದ ಲೇಡಿ ಅರೆಸ್ಟ್

ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಮ್ಮೇಲೆ ಅಥವಾ ಪ್ರತ್ಯೇಕ ಪಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ನಾನು ಕೂಡ ಅಭಿಪ್ರಾಯ ಪಡುತ್ತೇನೆ.

ಈಗ ತಮಗೆ ಕಳುಹಿಸುತ್ತಿರುವ ವಿಶ್ವಮಾನವ ಕುವೆಂಪು ಹೋರಾಟ ಸಮಿತಿಯ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ.

Live Tv

Share This Article
Leave a Comment

Leave a Reply

Your email address will not be published. Required fields are marked *