ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ ಮಾಡೋ ಬದಲು ಯೋಗ ಮಾಡಿ: ರಾಮ್‍ದೇವ್

Public TV
1 Min Read

ನವದೆಹಲಿ: ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಅರ್ಥಹೀನ ರಾಜಕೀಯವಾಗಿದೆ. ಇದರ ಬದಲು ಪ್ರತಿಭಟನಾಕಾರರು ಯೋಗ ಮಾಡಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಗ್ನಿಪಥ್ ಪ್ರತಿಭಟನಕಾರರು ಯೋಗ ಮಾಡಿದ್ದರೆ, ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿರಲಿಲ್ಲ. ಪ್ರತಿಭಟನೆಯನ್ನು ಬಿಟ್ಟು ಅವರು ಯೋಗವನ್ನು ಮಾಡಬೇಕಾಗಿತ್ತು ಎಂದ ಅವರು, ರಾಜಕೀಯದಲ್ಲಿ ಯೋಗ ಇರಬೇಕು, ಆದರೆ ಯೋಗದಲ್ಲಿ ರಾಜಕೀಯ ಇರಬಾರದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಅಧಿಕಾರದಿಂದ ತೆಗೆದು ಹಾಕಲು ದೇಶದಲ್ಲಿ ಕೆಲವರು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಾಲುಮರದ ತಿಮ್ಮಕ್ಕಗೆ BDAಯಿಂದ ನಿವೇಶನ ಹಂಚಿಕೆ

ಯೋಗವು ಸ್ವಯಂ ಶಿಸ್ತು ಮತ್ತು ಸ್ವಯಂ ಪ್ರೇರಣೆಯಾಗಿದೆ. ಇದು ಸ್ವಯಂ ವಿಶ್ಲೇಷಣೆಯೊಂದಿಗೆ ಹಲವು ಆಯಾಮಗಳನ್ನು ಹೊಂದಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರುವುದು ಮತ್ತು ನಿಮ್ಮ ಮನಸ್ಸು, ಆಲೋಚನೆಗಳು ಮತ್ತು ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಯೋಗವಾಗಿದೆ ಎಂದರು. ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಬೊಮ್ಮಾಯಿಗೆ ನಿರ್ಧಾರ ತೆಗೆದುಕೊಳ್ಳೋ ಧೈರ್ಯವಿಲ್ಲ: ಮುಖ್ಯಮಂತ್ರಿ ಚಂದ್ರು

ಜೂನ್ 14ರಂದು ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿತ್ತು. ಇದಾದ ಬಳಿಕ ಈ ಯೋಜನೆಯನ್ನು ವಿರೋಧಿಸಿ ದೇಶದ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ತಾರಕಕ್ಕೆ ಏರಿದೆ. 17.5 ರಿಂದ 21 ವರ್ಷದೊಳಗಿನ ಸೈನಿಕರನ್ನು 4 ವರ್ಷಗಳ ಅವಧಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ನೇಮಕ ಮಾಡಿಕೊಳ್ಳುವ ಕೇಂದ್ರದ ಯೋಜನೆಗೆ ಕಳೆದ 4 ದಿನಗಳಿಂದ ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಹರಿಯಾಣ, ತೆಲಂಗಾಣ ರಾಜ್ಯಗಳಲ್ಲಿ ಪ್ರತಿಭಟನೆ ಭುಗಿಲೆದ್ದಿತ್ತು.

Live Tv

Share This Article
Leave a Comment

Leave a Reply

Your email address will not be published. Required fields are marked *