ಉದಯಪುರದ ಹತ್ಯೆ ಖಂಡನೀಯ: ಇದು ದೇಶದ ಕಾನೂನು, ಇಸ್ಲಾಂ ಧರ್ಮಕ್ಕೆ ವಿರುದ್ಧವಾದದ್ದು – ಮುಸ್ಲಿಂ ಮಂಡಳಿ

Public TV
1 Min Read

ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ನಡೆದಿರುವ ಹತ್ಯೆ ಖಂಡನೀಯ. ಇದು ಇಸ್ಲಾಂ ಮತ್ತು ದೇಶದ ಕಾನೂನಿಗೆ ವಿರುದ್ಧವಾಗಿದೆ ಎಂದು ಜಮಿಯತ್ ಉಲಮಾ-ಇ-ಹಿಂದ್ ಖಂಡನೆ ವ್ಯಕ್ತಪಡಿಸಿದೆ.

ಜಮೀಯತ್ ಉಲಮಾ-ಇ-ಹಿಂದ್‌ನ ಪ್ರಧಾನ ಕಾರ್ಯದರ್ಶಿ ಮೌಲಾನಾ ಹಲ್ಸಿಮುದ್ದೀನ್ ಖಾಸ್ಮಿ, ಪ್ರವಾದಿ ವಿಚಾರವನ್ನೇ ನೆಪವಾಗಿಟ್ಟುಕೊಂಡು ಉದಯಪುರದಲ್ಲಿ ನಡೆದ ಕ್ರೂರ ಹತ್ಯೆಯ ಘಟನೆ ಖಂಡನೀಯ. ಇದು ನೆಲದ ಕಾನೂನು ಮತ್ತು ಧರ್ಮಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯಪುರ ಹತ್ಯೆ: ಆರೋಪಿಗಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಜೊತೆ ನಂಟು

ಈ ಕೃತ್ಯವನ್ನು ಯಾರೇ ಮಾಡಿದರೂ ಅದನ್ನು ಸಮರ್ಥಿಸಲು ಸಾಧ್ಯವಿಲ್ಲ. ನಮ್ಮ ದೇಶದಲ್ಲಿ ಕಾನೂನು ವ್ಯವಸ್ಥೆ ಇದೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಎಲ್ಲಾ ನಾಗರಿಕರು ತಾಳ್ಮೆಯಿಂದ ವರ್ತಿಸಿ ದೇಶದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರವಾದಿ ಮೊಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಈ ಘಟನೆಯಿಂದ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆ ಭುಗಿಲೆದ್ದಿದೆ. ಇದನ್ನೂ ಓದಿ: ಹತ್ಯೆಯಾದ ಟೈಲರ್‌ಗೆ 10 ದಿನಗಳ ಹಿಂದೆಯೇ ಬಂದಿತ್ತು ಬೆದರಿಕೆ ಕರೆ!

ಟೈಲರ್‌ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಎಲ್ಲಾ ಜಿಲ್ಲೆಗಳಲ್ಲಿ ಒಂದು ತಿಂಗಳು ಸಿಆರ್‌ಪಿಸಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ಹತ್ಯೆಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಕೂಡ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *