ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

Public TV
2 Min Read

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಕಾತರವಾಗಿದೆ.

ಲಂಡನ್‌ನ ಓವೆಲ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 110 ರನ್ ಗಳಿಸಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ಇಂದು 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿದೆ. ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಗುರಿ ಹೊಂದಿದ್ದು, ಬೌಲಿಂಗ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಿದೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

ಟಿ20 ಸರಣಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ, ಮೊದಲ ಏಕದಿನದಲ್ಲಿ ಆಂಗ್ಲರನ್ನು ಮಣ್ಣುಮುಕ್ಕಿಸಿತ್ತು. ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ ತನ್ನ ಲಯ ಮುಂದುವರಿಸಲು ಎದುರು ನೋಡುತ್ತಿದ್ದರೆ, ಇಂಗ್ಲೆಂಡ್ ಸಮಬಲ ಸಾಧಿಸಿ ಮುಖಭಂಗ ತಪ್ಪಿಸಿಕೊಳ್ಳುವ ಕಾತರದಲ್ಲಿದೆ.

ನಂ.1 ಸ್ಥಾನಕ್ಕೆ ಮರಳಿರುವ ಬುಮ್ರಾ ಮತ್ತೊಮ್ಮೆ ಭಾರತದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದು, ಮೊಹಮದ್ ಶಮಿ, ಪ್ರಸಿದ್ಧ್ ಕೃಷ್ಣ ಬೆಂಬಲಿಸಲಿದ್ದಾರೆ. ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ರವೀಂದ್ರ ಜಡೇಜಾ ಸ್ಥಾನ ಉಳಿಸಿಕೊಳ್ಳುವುದು ಖಚಿತವಾಗಿದೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಬೆಂಕಿ ಬೌಲಿಂಗ್‌ ಇದೀಗ ಬುಮ್ರಾ ಏಕದಿನ ಕ್ರಿಕೆಟ್‌ನ ನಂ.1 ಬೌಲರ್‌

ರೋಹಿತ್ ಅಬ್ಬರದ ಫಾರ್ಮ್ ಭಾರತಕ್ಕೆ ಮತ್ತಷ್ಟು ಬಲ ತುಂಬಿದ್ದು, ಶಿಖರ್ ಧವನ್ ಸಹ ಭರವಸೆ ಮೂಡಿಸಿದ್ದಾರೆ. ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅಲಭ್ಯರಾಗಲಿದ್ದು, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್, ರಿಷಬ್ ಸಂತ್, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾಗಿ ಕಣಕ್ಕಿಳಿದು ಅಬ್ಬರಿಸಲಿದ್ದಾರೆ.

ಇಂಗ್ಲೆಂಡ್ ಬ್ಯಾಟರ್‌ಗಳು, ಬೌಲರ್‌ಗಳೂ ನಿರಂತರವಾಗಿ ಒತ್ತಡಕ್ಕೆ ಸಿಲುಕುತ್ತಿದ್ದು, ಇದರ ಲಾಭ ಪಡೆಯಲು ಭಾರತ ಇನ್ನಷ್ಟು ರಣತಂತ್ರಗಳನ್ನು ಹೂಡಿದೆ.

ವಿರಾಟ್ ಕೊಹ್ಲಿ ಅಲಭ್ಯ: ಸತತ ಬ್ಯಾಟಿಂಗ್ ಲಯದ ಸಮಸ್ಯೆ ಎದುರಿಸುತ್ತಿರುವ ವಿರಾಟ್ ಕೊಹ್ಲಿಗೆ ಗಾಯದ ಸಮಸ್ಯೆಯೂ ಕಾಡುತ್ತಿದ್ದು, ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು 2ನೇ ಏಕದಿನ ಪಂದ್ಯಕ್ಕೂ ಆಯ್ಕೆಗೆ ಲಭ್ಯರಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *