ಬಿಗ್ ಬಾಸ್ ಮನೆಗೆ ಕಾಫಿನಾಡು ಚಂದು ವೈಲ್ಡ್ ಕಾರ್ಡ್ ಎಂಟ್ರಿ?

By
2 Min Read

ಬಿಗ್ ಬಾಸ್ ಓಟಿಟಿ ಶೋ ಶುರುವಾಗುವ ಮುಂಚೆ ಹವಾ ಜೋರಾಗಿತ್ತು. ಯಾರೆಲ್ಲಾ ಸ್ಪರ್ಧಿಗಳಿರುತ್ತಾರೆ ಎಂಬುದರ ಬಗ್ಗೆ ಕುತೂಹಲವಿತ್ತು. ಅದರಲ್ಲೂ ಬಿಗ್ ಬಾಸ್ ಮನೆಗೆ ಕಾಫಿನಾಡು ಚಂದು ಕೂಡ ಇರಲಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತ್ತು. ಆದರೆ ಬಿಗ್ ಬಾಸ್ ಗ್ರ್ಯಾಂಡ್ ಲಾಂಚ್ ಬಳಿಕ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಈಗ ಕಾಫಿನಾಡು ಚಂದು ಬಿಗ್ ಬಾಸ್ ಮನೆಗೆ ಬರಲು ಕಸರತ್ತು ಮಾಡ್ತಿದ್ದಾರಂತೆ.

ಪ್ರೇಕ್ಷಕರ ದೃಷ್ಟಿ ಸದ್ಯ ಬಿಗ್ ಬಾಸ್ ಮನೆಯ ಮೇಲಿದೆ. ಬಿಗ್ ಬಾಸ್ ಮನೆಗೆ ಗ್ರ್ಯಾಂಡ್ ಆಗಿ ಕಾಫಿನಾಡು ಚಂದು ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಶೋ ಲಾಂಚ್ ಬಳಿಕ ಕಾಫಿನಾಡು ಚಂದು ಅವರ ಅನುಪಸ್ಥಿತಿ ಅಭಿಮಾನಿಗಳಿಗೆ ಕಾಡಿತ್ತು. ಈಗ ತಾವೇ ಬಿಗ್ ಬಾಸ್ ಮನೆಗೆ ಹೋಗಬೇಕೆಂದು ಸೋಷಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದು ತೆರೆಮರೆಯಲ್ಲಿ ಕಸರತ್ತು ಮಾಡ್ತಿದ್ದಾರೆ.

ಇನ್ನು ತಾವು ಕೂಡ ಬಿಗ್ ಬಾಸ್ ಮನೆಗೆ ಹೋಗಬೇಕೆಂದು ಹಲವಾರು ಬಾರಿ ಕಾಫಿನಾಡಿನ ಚಂದು ಹೇಳಿಕೊಂಡಿದ್ದರು. ಕೊನೆಗೆ ಅದು ಕೈಗೂಡಲಿಲ್ಲ. ಆದರೂ ಸುಮ್ಮನೆ ಕೂರದ ಕಾಫಿ ನಾಡಿನ ಚಂದು ಹೊಸದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಹೊಸ ಅಭಿಯಾನವೊಂದನ್ನು ತಾವೇ ಶುರು ಮಾಡಿಕೊಂಡಿದ್ದಾರೆ. ಎಲ್ಲರ ಬಳಿ ತೆರಳಿ ಕಾಫಿನಾಡಿನ ಚಂದು ಅವರನ್ನು ಬಿಗ್‌ಬಾಸ್‌ಗೆ ಕಳುಹಿಸವಂತೆ ಒತ್ತಾಯಿಸುವ ವಿಡಿಯೋ ಮಾಡಿಸಿ ಅಪ್ಲೋಡ್ ಮಾಡಿಸುತ್ತಿದ್ದಾರಂತೆ. ಈ ಬಗ್ಗೆ ಇದೀಗ ಎಲ್ಲೆಲ್ಲೂ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ರಾಕೇಶ್ ಮೇಲೆ ನನಗೆ ಫೀಲಿಂಗ್ಸ್ ಇದೆ ಎಂದು ಬಹಿರಂಗವಾಗಿ ಹೇಳಿಕೊಂಡ ಸೋನು ಗೌಡ

ಬಿಗ್‌ಬಾಸ್ ಮನೆಗೆ ಚಂದು ಹೋಗುವುದು ಖಚಿತ ಅಂತ ಜನರು ಕೂಡ ಅಂದುಕೊಂಡಿದ್ದರು. ಆದರೆ, ಅದು ಸಾಧ್ಯವಾಗಲಿಲ್ಲ. ಹೀಗಾಗಿ ಚಂದು ಎಲ್ಲರ ಬಳಿ ತೆರಳಿ ತನ್ನನ್ನು ದೊಡ್ಮನೆಗೆ ಕಳುಹಿಸುವಂತೆ ವಿಡಿಯೋ ಮಾಡಿಸಿ ಅಪ್ಲೋಡ್ ಮಾಡಿಸುತ್ತಿದ್ದಾರೆ. ಪ್ರತಿ ದಿನ ಸಮಯ ವ್ಯರ್ಥ ಮಾಡದೇ ಈ ಅಭಿಯಾನವನ್ನು ಕಾಫಿ ನಾಡಿನ ಚಂದು ಶುರು ಮಾಡಿದ್ದಾರಂತೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *