ಸ್ವಾತಂತ್ರ್ಯ ದಿನಾಚರಣೆ : ಇಂದು ಕಿರುತೆರೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

Public TV
1 Min Read

ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದ್ದ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಇಂದು ಝೀ ವಾಹಿನಿಯಲ್ಲಿ ಪ್ರಸಾರಕಾಣಲಿದೆ. ಮಧ್ಯಾಹ್ನ ಮೂರು ಗಂಟೆಗೆ ಪ್ರಸಾರವಾಗಲಿರುವ ಈ ಸಿನಿಮಾ ದೇಶಾದ್ಯಂತ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಅಲ್ಲದೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ, ಈ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಉತ್ತರ ಪ್ರದೇಶ್, ಗುಜರಾತ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯತಿ ನೀಡುವ ಮೂಲಕ, ಹೆಚ್ಚೆಚ್ಚು ಜನರಿಗೆ ತಲುಪಿಸಲಾಯಿತು. ಅಲ್ಲದೇ, ಈ ಸಿನಿಮಾದ ಕುರಿತು ಪರ ಮತ್ತು ವಿರೋಧದ ಮಾತುಗಳು ಕೂಡ ಕೇಳಿ ಬಂದವು. ಇದನ್ನೂ ಓದಿ:ಗಂಟಲು ನೋವಿನ ಔಷಧಿ ವಿಚಾರಕ್ಕೆ ಸೋನು ಕಾಲೆಳೆದ ಕಿಚ್ಚ ಸುದೀಪ್

ಕಾಶ್ಮೀರ ಪಂಡಿತರ ಹತ್ಯೆಯನ್ನು ಪ್ರಮುಖವಾಗಿಟ್ಟುಕೊಂಡು ಬಂದಿರುವ ಈ ಸಿನಿಮಾದಲ್ಲಿ ಕನ್ನಡಿಗ ಪ್ರಕಾಶ್ ಬೆಳವಾಡಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎನ್ನುವುದು ವಿಶೇಷ. ಥಿಯೇಟರ್ ನಲ್ಲಿ ಕೇವಲ ಹಿಂದಿಯಲ್ಲಿ ಮಾತ್ರ ಈ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಿಗೆ ಈ ಚಿತ್ರ ಡಬ್ ಆಗಿದೆ. ಝೀ ಕನ್ನಡದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕನ್ನಡದಲ್ಲೇ ಪ್ರಸಾರವಾಗಲಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *