ಆನೆ ದಾಳಿಗೆ ವ್ಯಕ್ತಿ ಸಾವು- ಕಾಡಿನಲ್ಲಿ ಮೃತದೇಹವನ್ನ 1 ಕಿ.ಮೀ ಎಳೆದೊಯ್ದ ಕಾಡಾನೆ

Public TV
2 Min Read

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ.

ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಒಂದು ಕಿ.ಮೀಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಕಾಡಿನಲ್ಲಿ ಎಳೆದೊಯ್ದಿದೆ.

ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನೊಳಗೆ ಸುಮಾರು ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಹರಡಿ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಒಂದು ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ. ಮೃತದೇಹವನ್ನು ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಕಾಣದಾಗ ಸ್ಥಳೀಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸ್ವಾತಂತ್ರ‍್ಯ ದಿನದಂದೇ ರೈತರ ಪ್ರತಿಭಟನೆ – ದರದರನೆ ಎಳೆದೊಯ್ದ ಪೊಲೀಸರು

ಬೆಳಗ್ಗೆ ಸ್ಥಳೀಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳೀಯರು ಬಂದ ಬಳಿಕ ಆನೆ ಹೋಗಿದೆ. ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂಧಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದು ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕಳೆದ ಹಲವು ತಿಂಗಳಿಂದ ಒಂಟಿ ಸಲಗದ ಕಾಟ ಬಹಳಷ್ಟಿದೆ. ಜನ ಓಡಾಡಲು ಹೆದರುತ್ತಿದ್ದಾರೆ. ಕೂಡಲೇ ಆನೆಯನ್ನು ಸ್ಥಳಾಂತರಿಸಿ ಮೃತ ಆನಂದ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಭೂಮಿಯಿಂದ 30 ಕಿ.ಮೀ ಎತ್ತರದಲ್ಲಿ ಹಾರಾಡಿತು ರಾಷ್ಟ್ರಧ್ವಜ

Live Tv

Share This Article
Leave a Comment

Leave a Reply

Your email address will not be published. Required fields are marked *