ನೀರಿನ ತೊಟ್ಟಿಗೆ ಬಿದ್ದು ಎರಡು ವರ್ಷದ ಬಾಲಕಿ ಸಾವು

Public TV
1 Min Read

ಆನೇಕಲ್: ಎರಡು ವರ್ಷದ ಪುಟ್ಟ ಕಂದಮ್ಮ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ಆನೇಕಲ್ ಗಡಿ ಭಾಗದ ಹೊನ್ನಹಟ್ಟಿ ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕಿಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ಈಕೆ ಒರಿಸ್ಸಾ ಮೂಲದ ದಂಪತಿಯ ಮಗಳು. ಮೀನಾಕ್ಷಿ ತಂದೆ-ತಾಯಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತ ಮೀನಾಕ್ಷಿ ತನ್ನ ಪಾಡಿಗೆ ತಾನು ನೀರಿನಲ್ಲಿ ಆಟ ಆಡುತ್ತಿದ್ದಳು. ಹೀಗೆ ಆಟವಾಡುತ್ತಾ ನೀರಿನ ತೊಟ್ಟಿ ಬಳಿ ಹೋಗಿ ಬಿದ್ದಿದ್ದಾಳೆ. ಇದನ್ನೂ ಓದಿ: ಬಿಲ್ಕಿಸ್‌ ಬಾನು ಕೇಸ್‌ – ಅಪರಾಧಿಗಳ ಬಿಡುಗಡೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಈ ವಿಚಾರ ತಿಳಿಯುತ್ತಿದ್ದಂತೆಯೇ ದಂಪತಿ ತೊಟ್ಟಿಯಿಂದ ಮಗುವನ್ನು ಮೇಲೆತ್ತಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಬರುವ ಮಧ್ಯದಲ್ಲೇ ಮಗು ಸಾವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗು ಮೃತಪಟ್ಟ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆ ಬಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ಸಂಬಂಧ ತಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *