ರಷ್ಯಾದಿಂದ ಡಿಸ್ಕೌಂಟ್‌ ಬೆಲೆಯಲ್ಲಿ ತೈಲ – 35 ಸಾವಿರ ಕೋಟಿ ಗಳಿಸಿದ ಭಾರತ

By
2 Min Read

ನವದೆಹಲಿ: ರಷ್ಯಾದಿಂದ(Russia) ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು(Crude Oil) ಖರೀದಿ ಮಾಡಿದ್ದರಿಂದ ಭಾರತ(India) 35 ಸಾವಿರ ಕೋಟಿ ರೂ. ಗಳಿಕೆ ಮಾಡಿದೆ.

ಉಕ್ರೇನ್‌ Ukraine) ಮೇಲೆ ಯುದ್ಧ ಸಾರಿದ ಬಳಿಕ ರಷ್ಯಾದಿಂದ ತೈಲ ಖರೀದಿ ಮಾಡದಂತೆ ಅಂತಾರಾಷ್ಟ್ರೀಯ ಮಟ್ಟದ ಒತ್ತಡ ಇದ್ದರೂ ಯಾವುದಕ್ಕೂ ಬಗ್ಗದ ಭಾರತ ಈಗಲೂ ಆಮದು ಮುಂದುವರಿಸಿದೆ.

ರಷ್ಯಾದಿಂದ ಕಡಿಮೆ ದರದಲ್ಲಿ ತೈಲ ಖರೀದಿ ಮಾಡಿದ ಬಳಿಕ ದೇಶೀಯ ತೈಲ ಕಂಪನಿಗಳು ಸಂಸ್ಕರಿಸಿ  ವಿದೇಶಗಳಿಗೆ ಮಾರಿತ್ತು. ಈ ವಿಚಾರ ಮನಗಂಡ ಕೇಂದ್ರ ಸರ್ಕಾರ ವಿದೇಶಗಳಿಗೆ ರಫ್ತು ಮಾಡುವ ತೈಲಗಳಿಗೆ ವಿಂಡ್‌ಫಾಲ್‌ ತೆರಿಗೆ(Windfall Tax) ಹೆಚ್ಚಿತ್ತು. ಈ ತೆರಿಗೆಯಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಬಂದಿದೆ. ಇದನ್ನೂ ಓದಿ: ಷರತ್ತು ವಿಧಿಸಿ ಭಾರತಕ್ಕೆ ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ತೈಲ ನೀಡಲು ಮುಂದಾದ ರಷ್ಯಾ

ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ತೈಲ ಪೂರೈಕೆ ದೇಶಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಸೌದಿ ಮೂರನೇ ಸ್ಥಾನಕ್ಕೆ ಕುಸಿದರೆ ರಷ್ಯಾ ಎರಡನೇ ಸ್ಥಾನಕ್ಕೆ ಜಿಗಿದಿತ್ತು. ಈಗ ಮತ್ತೆ ಸ್ಥಾನ ಬದಲಾಗಿದ್ದು ಇರಾಕ್‌ ಮೊದಲ ಸ್ಥಾನಲ್ಲಿದ್ದರೆ ಸೌದಿ ಎರಡನೇ, ರಷ್ಯಾ ಮೂರನೇ ಸ್ಥಾನಲದಲ್ಲಿದೆ

ವಾಣಿಜ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ ಏಪ್ರಿಲ್‌ ಜುಲೈ ಅವಧಿಯಲ್ಲಿ 1.3 ಶತಕೋಟಿ ಡಾಲರ್‌ ಮೌಲ್ಯದ ತೈಲವನ್ನು ಆಮದು ಮಾಡಿಕೊಂಡಿದ್ದರೆ ಈ ಬಾರಿ ಈ ಅವಧಿಯಲ್ಲಿ ರಷ್ಯಾದಿಂದ 11.2 ಶತಕೋಟಿ ಡಾಲರ್‌ ಮೌಲ್ಯದ ತೈಲವನ್ನು ಆಮದು ಮಾಡಿಕೊಳ್ಳಲಾಗಿದೆ.

ಈ ಹಿಂದೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(Jaishankar) ಅವರು, ರಷ್ಯಾದಿಂದ ಭಾರತ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಸಮರ್ಥಿಸಿಕೊಂಡು ಇದೊಂದು ʼಬೆಸ್ಟ್‌ ಡೀಲ್‌ʼ ಎಂದು ಬಣ್ಣಿಸಿದ್ದರು. ಬೆಲೆಗಳು ದುಬಾರಿಯಾಗಿರುವ ಸಮಯದಲ್ಲಿ ಪ್ರತಿಯೊಂದು ದೇಶವೂ ತನ್ನ ಪ್ರಜೆಗಳಿಗೆ ಸಾಧ್ಯವಾದಷ್ಟು ಕಡಿಮೆ ಬೆಲೆಯಲ್ಲಿ ತೈಲ ನೀಡಲು ಪ್ರಯತ್ನ ಮಾಡುತ್ತದೆ. ಈಗ ಅದನ್ನೇ ನಾವು ಮಾಡುತ್ತಿದ್ದೇವೆ ಎಂದು ಜೈಶಂಕರ್ ಸಮರ್ಥಿಸಿಕೊಂಡರು. ಇದನ್ನೂ ಓದಿ: ನಮ್ಮದು ಬೆಸ್ಟ್‌ ಡೀಲ್‌ – ರಷ್ಯಾದಿಂದ ತೈಲ ಖರೀದಿಗೆ ಜೈಶಂಕರ್‌ ಸಮರ್ಥನೆ

ಕೋವಿಡ್ 19 ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಇಳಿಕೆ ಕಂಡಿತ್ತು. ಈ ಸಂದರ್ಭದಲ್ಲಿ ಭಾರತ ಕಡಿಮೆ ದರದಲ್ಲಿ ತೈಲವನ್ನು ಖರೀದಿಸಿ ಈ ಸಂಗ್ರಹಾಗಾರದಲ್ಲಿ ಸಂಗ್ರಹಿಸಿ ಭರ್ತಿ ಮಾಡಿತ್ತು. ಇದರಿಂದಾಗಿ ಒಟ್ಟು 5 ಸಾವಿರ ರೂ. ಕೋಟಿ ರೂ. ವಿದೇಶಿ ವಿನಿಮಯ ಉಳಿತಾಯವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿತ್ತು.

ಕೋವಿಡ್19 ಬರುವುದಕ್ಕೆ ಮೊದಲು ಮಂಗಳೂರು, ಪಾದೂರು ಅರ್ಧ ತುಂಬಿದ್ದರೆ, ವಿಶಾಖಪಟ್ಟಣದಲ್ಲಿ ಸ್ವಲ್ಪ ಜಾಗ ಉಳಿದಿತ್ತು. ದರ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೌದಿ ಅರೇಬಿಯಾ, ಯುಎಇ ಮತ್ತು ಇರಾಕ್ ನಿಂದ ತೈಲವನ್ನು ಖರೀದಿಸಿ ಭರ್ತಿ ಮಾಡಿತ್ತು. ಇದನ್ನೂ ಓದಿ: ಕೋವಿಡ್ 19 ವೇಳೆಯಲ್ಲಿ ದೇಶಕ್ಕೆ ಸಾವಿರಾರು ಕೋಟಿ ಉಳಿಸಿದ ಮಂಗಳೂರು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *