ಬೆಂಗಳೂರು: ಉತ್ತರಾಖಂಡದ ದ್ರೌಪದಿ ದಂಡ-2 ಶಿಖರದಲ್ಲಿ ಸಂಭವಿಸಿದ ಹಿಮಪಾತದಲ್ಲಿ(Uttarakhand Avalanche ) ಇಬ್ಬರು ಕನ್ನಡಿಗರು ಸೇರಿದಂತೆ ಈವರೆಗೂ 29 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ವಿಕ್ರಮ್ ಮತ್ತು ರಕ್ಷಿತ್ ಮೃತದೇಹಗಳು ಪತ್ತೆಯಾಗಿದ್ದು, ಡೆಹ್ರಾಡೂನ್ನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ. ಇಬ್ಬರು ಕನ್ನಡಿಗರ ಮೃತದೇಹ ತರುವ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದನ್ನೂ ಓದಿ: ಶೇ.10ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಸಂಘ ಒತ್ತಾಯ
ಮೃತದೇಹಗಳನ್ನ ಶಿಫ್ಟ್ ಮಾಡಲು ಒಂದೇ ಒಂದು ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿಲ್ಲ. ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ಮೃತದೇಹ ತರಲಾಗ್ತಿದೆ. ಮೃತದೇಹ ಗುರುತಿಸಲು ತೆರಳಿದ್ದ ಕುಟುಂಬಸ್ಥರು ಹಾಗೂ ಸ್ನೇಹಿತರಿಗೆ ವಿಮಾನ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಮೃತರ ಕುಟುಂಬಸ್ಥರು ಅಸಮಾಧಾನ ಹೊರಹಾಕಿದ್ದಾರೆ.
ಮಂಗಳವಾರ ಸಂಜೆ 4 ಗಂಟೆ ವೇಳೆಗೆ ಮೃತದೇಹ ಬೆಂಗಳೂರು ತಲುಪುವ ಸಾಧ್ಯತೆಗಳಿವೆ.

 
			
 
		 
		 
                                
                              
		