ಬೊಮ್ಮಾಯಿ ಸಿಎಂ ಸ್ಥಾನ ಉಳಿಸಿಕೊಳ್ಳಬೇಕಾದರೆ RSS ನಾಯಕರ ಪಾದಪೂಜೆ ಮಾಡಲೇಬೇಕು: ಸಿದ್ದರಾಮಯ್ಯ

Public TV
2 Min Read

ಬೆಂಗಳೂರು: ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ನಿಮ್ಮ ಧಮ್, ತಾಕತ್‍ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್‌ಎಸ್‌ಎಸ್‌ (RSS) ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಕಾಂಗ್ರೆಸ್ (Congress) ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿ (Rahul Gandhi) ಅವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಸದ್ಯಕ್ಕೆ ದೇಶದ ಪ್ರಧಾನಿ (PM) ನರೇಂದ್ರ ಮೋದಿ (Narendra Modi) ಅವರು, ರಾಹುಲ್ ಗಾಂಧಿ ಅಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ. ಇದನ್ನೂ ಓದಿ: ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ಅವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ. ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಬೊಮ್ಮಾಯಿ ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ. ಇದನ್ನೂ ಓದಿ: 137 ವರ್ಷಗಳ ಇತಿಹಾಸದಲ್ಲಿ 6 ಚುನಾವಣೆ – ಒಮ್ಮೆ ಮಾತ್ರ ಗಾಂಧಿ ಪರಿವಾರ ಸ್ಪರ್ಧೆ!

ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ಆಪರೇಷನ್ ಕಮಲದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ. ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ.

ಸಾರ್ವಜನಿಕ ಸಭೆಗಳಲ್ಲಿ ವಿರೋಧ ಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು ಎರಡುವರೆ ಸಾವಿರ ಕೋಟಿ ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತನ ಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್ ಗಾಂಧಿ ಅವರಿಂದಲೇ ನೀವು ತನಿಖೆ ಮಾಡಿಸುವುದಾದರೆ ಡಿಕೆ ಶಿವಕುಮಾರ್ (D.K Shivakumar) ವಿರುದ್ಧ ಇಡಿ (ED), ಐಟಿಗಳನ್ನು (IT) ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ ಎಂದು ಸರಣಿ ಟ್ವೀಟ್ ಮೂಲಕ ಸಿದ್ಧರಾಮಯ್ಯ ಗುಡುಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *